Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ..!
  • Bangalore
  • Front news
  • Politics
  • State

ಸಿಎಂ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ..!

admin July 15, 2025 1 minute read
Spread the love

ಬೆಂಗಳೂರು: ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ. ಇದನ್ನೂ ಓದಿ: ವಿಶ್ವ ಕೌಶಲ್ಯ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.

1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.

ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ವಿಶ್ವ ಕೌಶಲ್ಯ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
Next: ಸಿಎಂ ಮಾಧ್ಯಮ ಸಲಹೆಗಾರ ಅವರಿಗೆ ಸನ್ಮಾನ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.