ಐತಿಹಾಸಿಕ ಮಹಾ ಕುಂಭ ಮೇಳ

ಐತಿಹಾಸಿಕ ಮಹಾ ಕುಂಭ ಮೇಳ

ಮಂಡ್ಯ: ಶ್ರೀ ಶ್ರೀ ಶ್ರೀ ಮಲೈ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ಉದ್ಘಾಟನೆ ಮಾಡಿದರು.

ಮಂಡ್ಯ ಜಿಲ್ಲೆ ಕೆ. ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಾಲ್ಕು ದಿನಗಳ ಐತಿಹಾಸಿಕ ಮಹಾ ಕುಂಭ ಮೇಳಕ್ಕೆ ರಾಜ್ಯಸಭಾ ಸದಸ್ಯರು ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ ಇಂದು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ದೇಶದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಪುನರುಜೀವನಗೊಳಿಸುತ್ತಿರುವಂತೆ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಕಾರಿಡಾರ್ ಗಳ ಅಭಿವೃದ್ದಿಗೆ ಮುಖ್ಯಮಂತ್ರಿ ಒಲವು ತೋರಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ವರದಿ ನೀಡುವಂತೆ ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು  ತಿಳಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ,  ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರು ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರು ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು,ಅಬಕಾರಿ ಮತ್ತು  ಜಿಲ್ಲಾ ಉಸ್ತುವಾರಿ ಸಚಿವರು ಕೆ.ಗೋಪಾಲಯ್ಯ, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡೆ  ಸಚಿವರಾದ ಡಾ. ನಾರಾಯಣಗೌಡ,ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್,ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ.ಜೊಲ್ಲೆ,ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ,  ತಹಶೀಲ್ದಾರ್ ರೂಪ,ಸಣ್ಣ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related