ಬುಡಕಟ್ಟು ಸಮುದಾಯಗಳ ಇತಿಹಾಸ ಪುರುಷರು ಭಗವಾನ್ ಶ್ರೀ ಬಿರ್ಸಾಮುಂಡಾ: ಬಿ. ನಾಗೇಂದ್ರ

ಬುಡಕಟ್ಟು ಸಮುದಾಯಗಳ ಇತಿಹಾಸ ಪುರುಷರು ಭಗವಾನ್ ಶ್ರೀ ಬಿರ್ಸಾಮುಂಡಾ: ಬಿ. ನಾಗೇಂದ್ರ

ಬೆಂಗಳೂರು: ಬುಡಕಟ್ಟು ಸಮುದಾಯದ ದೇವಮಾನವರಾದ ಭಗವಾನ್ ಶ್ರೀ ಬಿರ್ಸಾ ಮುಂಡಾ ಜಯಂತಿ ಹಾಗೂ ಜನಜಾತೀಯ ಗೌರವ್ ದಿವಸ್ -2023 ರ ಕಾರ್ಯಕ್ರಮವನ್ನು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಮತ್ತು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಚಾಮರಾಜನಗರ ಜಿಲ್ಲಾಕೇಂದ್ರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಜ್ಯೋತಿ ಬೆಳಗಿಸಿ, ಪುಷ್ಪನಮನ ಸಲ್ಲಿಸಿ ಉದ್ಘಾಟನೆ ಮಾಡಿದರು.

ಈ ಸಂಧರ್ಭದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ರವರು, ಚಾಮರಾಜನಗರ ಶಾಸಕರಾದ ಸಿ. ಪುಟ್ಟರಂಗಶೆಟ್ಟಿರವರು, ಕೊಳ್ಳೇಗಾಲ ಕ್ಷೇತ್ರದ ಶಾಸಕರಾದ ಎ. ಆರ್. ಕೃಷ್ಣಮೂರ್ತಿ, ಹನೂರು ಕ್ಷೇತ್ರದ ಶಾಸಕ ಮಂಜುನಾಥ್, ಎಂ. ಎಲ್. ಸಿ. ಮರಿತಿಪ್ಪೇಗೌಡ, ನಗರಸಭಾ ಸದಸ್ಯರಾದ ಎಂ. ಮಹೇಶ್, ಬುಡಕಟ್ಟು ಸಮುದಾಯ ಮುಖಂಡರಾದ ಸಿ. ಮಾದೇಗೌಡ, ವಿ. ಮುತ್ತಯ್ಯ ಚಾಮರಾಜನಗರ ಜಿಲ್ಲಾಧಿಕಾರಿಗಳಾದ ಶಿಲ್ಪಾನಾಗ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರಾದ ಬಿ. ಕಲ್ಲೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ,ಜಿಲ್ಲಾ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಪ್ರೊ. ಶ್ರೀನಿವಾಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ.ಕೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related