ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

ಧಾರವಾಡ: ಇಡೀ ದೇಶದಾದ್ಯಂತ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಕರ್ನಾಟಕ ರಾಜ್ಯದಲ್ಲಿ ಬಹುಮತ ಪಡೆದು ಗೆದ್ದು ಬೀರಿದೆಇನ್ನು ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಸತತ ಐದನೇ ಬಾರಿಯಾಗಿ ಕೇಂದ್ರ ಸಚಿವಪ್ರಲ್ಹಾದ್ ಜೋಶಿ ಅವರು ಮತ್ತೆ ಐದನೇ ಬಾರಿಯೂ ಕೂಡ ತಮ್ಮ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಹೌದು, ಸತತವಾಗಿ ಐದನೇ ಬಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಸಂಸದ ಪ್ರಹ್ಲಾದ ಜೋಶಿ ಅವರು ಈ ಬಾರಿಯೂ ಕೂಡ ಗೆದ್ದು ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಸಂಸದ ಪ್ರಲ್ಹಾದ್​ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಥಮ ಬಾರಿಗೆ 2004ರಲ್ಲಿ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದರು. ಮತ್ತೆ 2009ರಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಕಣಕ್ಕೆ ಇಳಿದು ವಿಜಯಪತಾಕೆ ಹಾರಿಸಿದರು. ಸಂಸದ ಪ್ರಲ್ಹಾದ್​ ಜೋಶಿ ಅವರು 2014 ರಿಂದ 2016 ರವರೆಗೆ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಮುಂದಿನ ಪ್ರಧಾನಿ ಯಾರೆಂಬ ಪ್ರಶ್ನೆಗೆ ಕುಮಾರಸ್ವಾಮಿ ಹೇಳಿದ್ದೇನು..?

ನಂತರ ಮೂರನೇ ಬಾರಿಗೆ 2014ರಲ್ಲಿ ಮತ್ತೊಮ್ಮೆ ಸ್ಪರ್ಧಿಸಿ ಗೆಲುವು ಸಾಧಿಸಿದರು. ಇದೇ ಕ್ಷೇತ್ರದಿಂದ 2019 ರಲ್ಲಿ ಗೆದ್ದು 4ನೇ ಬಾರಿಗೆ ಸಂಸತ್ತು ಪ್ರವೇಶಿಸಿದ ಪ್ರಲ್ಹಾದ್​ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. ಇದೀಗ 2024ರಲ್ಲೂ ಗೆಲ್ಲುವ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

Related