ಪ್ರಜ್ವಲ್ ರೇವಣ್ಣನ ಬಂಧನದ ಬಗ್ಗೆ ಗೃಹ ಸಚಿವರು ಹೇಳಿದ್ದೇನು..?

ಪ್ರಜ್ವಲ್ ರೇವಣ್ಣನ ಬಂಧನದ ಬಗ್ಗೆ ಗೃಹ ಸಚಿವರು ಹೇಳಿದ್ದೇನು..?

ಬೆಂಗಳೂರು: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರು ಸುಮಾರು ಒಂದು ತಿಂಗಳಿಂದ ವಿದೇಶದಲ್ಲಿ ತಲೆಬರೆಸಿಕೊಂಡಿದ್ದರು.

ಕಳೆದ ಎರಡು ದಿನಗಳ ಹಿಂದೆ ಸ್ವತಃ ಅವರೇ ವಿಡಿಯೋ ಮಾಡುವ ಮೂಲಕ, ನಾನು ಇದೇ ತಿಂಗಳು (ಶುಕ್ರವಾರ 31) ರಂದು ಭಾರತ ದೇಶಕ್ಕೆ ಬರುವುದಾಗಿ ಹೇಳಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಬಂದರೆ ಮತ್ತು ಕರ್ನಾಟಕ ರಾಜ್ಯಕ್ಕೆ ಬಂದರೆ ಅವರನ್ನು ವಿಮಾನ ನಿಲ್ದಾಣದಲ್ಲೇ ಬಂಧನ ಮಾಡಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕೃತ ಮೂಲಗಳ ಪ್ರಕಾರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್ ಕಾಯ್ದಿರಿಸಿದ್ದಾರೆ ಮತ್ತು ಮೇ 31ರಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ನಿರೀಕ್ಷೆಯಿದೆ.

ಪ್ರಜ್ವಲ್ ವಿರುದ್ಧ ವಾರೆಂಟ್ ಜಾರಿಯಾಗಿರುವುದರಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಎಸ್‌ಐಟಿ ಕಾಯುತ್ತಿದೆ. ಆತನನ್ನು ಬಂಧಿಸಿ ಹೇಳಿಕೆ ಪಡೆಯಲಿದ್ದಾರೆ ಎಂದರು.

ಇನ್ನು ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಬೇಕಾಗಿದೆ. ಏಕೆಂದರೆ ಅವರ ವಿರುದ್ಧ ವಾರಂಟ್ ಹೊರಡಿಸಲಾಗಿದೆ. ಆದ್ದರಿಂದ ಅವರನ್ನು ಬಂಧಿಸಬೇಕಾಗುತ್ತದೆ ಎಂದರು.

 

Related