ಸನ್ಮಾನ್ಯ ಡಿಸಿಎಂ ರವರಿಂದ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ ಉದ್ಘಾಟನೆ

ಸನ್ಮಾನ್ಯ ಡಿಸಿಎಂ ರವರಿಂದ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ ಉದ್ಘಾಟನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವತಿಯಿಂದ ಈಜೀಪುರ ಮುಖ್ಯ ರಸ್ತೆಯ ಕೋರಮಂಗಲದಲ್ಲಿ ನಿರ್ಮಿಸಿರುವ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕವನ್ನು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ‌ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು.

ಈ ವೇಳೆ ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ, ಬಿಡಿಎ ಅಧ್ಯಕ್ಷರಾದ ಶ್ರೀ ಎನ್.ಎ ಹ್ಯಾರೀಸ್, ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ದಕ್ಷಿಣ ವಲಯ ಆಯುಕ್ತರಾದ ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related