ಹಾವೇರಿ: ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲ ಅಭಿವೃದ್ಧಿಗಾಗಿ ರಾಜಕೀಯ ಮರೆತು ಚರ್ಚೆ: ಸಿಎಂ
ಇಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು.
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.
– ಮುಖ್ಯಮಂತ್ರಿ @siddaramaiah#ಹಾವೇರಿಅಪಘಾತ— CM of Karnataka (@CMofKarnataka) June 28, 2024