ವಿಶ್ವ ಪಾರಂಪರಿಕ ಪಟ್ಟಿಗೆ ಹೊಯ್ಸಳ ದೇವಾಲಯ

ವಿಶ್ವ ಪಾರಂಪರಿಕ ಪಟ್ಟಿಗೆ ಹೊಯ್ಸಳ ದೇವಾಲಯ

 ನವದೆಹಲಿ, ಸೆ.19: ಅತ್ಯಂತ ಶ್ರೀಮಂತ, ವಾಸ್ತುಶಿಲ್ಪ ಕಲೆಗಳನ್ನು ಮೈಗೂಡಿಸಿಕೊಂಡಿರುವ ಹೊಯ್ಸಳ ಕಾಲದ ದೇವಾಲಯಗಳು ಯುನೆಸ್ಕೋ ವಿಶ್ವಪಾರಂಪರಿಕ ತಾಣದ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಹಾಸನ ಜಿಲ್ಲೆಯ ಬೇಲೂರಿನ ಚನ್ನಕೇಶವ ದೇವಾಲಯ, ಹಳೇಬೀಡು, ಮೈಸೂರಿನ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳಿಗೆ ಈ ಸ್ಥಾನ ಪ್ರಾಪ್ತವಾಗಿದ್ದು, ಇದರೊಂದಿಗೆ ಭಾರತದ 42 ತಾಣಗಳಿಗೆ ಆಂತಾರಾಷ್ಟ್ರೀಯ ಮನ್ನಣೆ ಸಿಕ್ಕಂತಾಗಿದೆ.ಈ ಕುರಿತು ಟ್ವೀಟ್ ಮಾಡಿರುವ ಯುನೆಸ್ಕೋ, ಭಾರತಕ್ಕೆ ಅಭಿನಂದನೆಗಳು, ಹೊಯ್ಸಳ ವಿಶಿಷ್ಠ ಹಾಗೂ ವಿಶೇಷ ವಾಸ್ತುಶಿಲ್ಪದ ಕೆತ್ತನೆಗಳು ಇದೀಗ ಯುನೆಸ್ಕೋ ವಿಶ್ವಪಾರಂಪರಿಕ ಪಟ್ಟಿಯಲ್ಲಿ ಅಚ್ಚೊತ್ತಿದೆ ಎಂದು ಟ್ವೀಟ್ ಮಾಡಿದೆ. 12 ರಿಂದ 13ನೇ ಶತಮಾನದಲ್ಲಿ ನಿರ್ಮಾಣವಾದ ಈ ದೇವಾಲಯಗಳು ವಾಸ್ತುಶಿಲ್ಪಗಳಿಂದಲೇ ವಿಶ್ವವಿಖ್ಯಾತಿಯಾಗಿದೆ.  ಯುನೆಸ್ಕೋ ತನ್ನ ಟ್ವೀಟರ್ ಖಾತೆಯಲ್ಲಿ ಬಹಿರಂಗಪಡಿಸಿತ್ತು. ಇದರಿಂದಾಗಿ ದೇಶದಲ್ಲಿರುವ ಒಟ್ಟು ವಿಶ್ವ ಪಾರಂಪರಿಕ ತಾಣಗಳ ಸಂಖ್ಯೆ ೪೧ಕ್ಕೆ ಏರಿಕೆಯಾಗಿತ್ತು. ಹೊಯ್ಸಳ ದೇವಾಲ ಸೇರ್ಪಡೆಯೊಂದಿಗೆ ಈ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.

Related