ಹುಬ್ಬಳ್ಳಿ: ಸರ್ಕಾರಿ ಶಾಲೆ ಗೋಡೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಬರಹ

ಹುಬ್ಬಳ್ಳಿ: ಸರ್ಕಾರಿ ಶಾಲೆ ಗೋಡೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಬರಹ

ಹುಬ್ಬಳ್ಳಿ, ಫೆ. 24: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪಾಕ್ ಪರ ಘೋಷಣೆ ಹಚ್ಚಾಗುತ್ತಿದ್ದು, ಮತ್ತೆ ಹುಬ್ಬಳ್ಳಿಯಲ್ಲಿ ದುಷ್ಕರ್ಮಿಗಳು ಸರ್ಕಾರಿ ಶಾಲೆಯ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂಬ ಬರಹವನ್ನು ಬರೆದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬಡುರಶಿಂಗಿ ಗ್ರಾಮದಲ್ಲಿ ನಡೆದಿದೆ.

ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದುಷ್ಕರ್ಮಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಬರೆದಿದ್ದಾರೆ. ಘಟನೆ ಸಂಬಂಧ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ.

ಘಟನೆ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಾಹಿತಿ ನೀಡಿದ ನಂತರವೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಗ್ರಾಮಾಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Related