ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ: ಸತೀಶ್ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ವಿಪಕ್ಷ ನಾಯಕರು ಹೇಳಿದ್ದಾರೆ.

ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ರೇಸ್ ನಲ್ಲಿ ಹಲವಾರು ಸಚಿವರು ಇದ್ದಾರೆ ಎಂಬ ಮಾಹಿತಿ ರಾಜ್ಯದಲ್ಲಿ ಗ್ರಾಸವಾಗಿ ಚರ್ಚೆಯಾಗುತ್ತಿದ್ದು, ಇದರ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆಸಿದ್ದು, ಕೆಪಿಸಿಸಿ ಅಧ್ಯಕ್ಷ ಹುದ್ದೆ ರೇಸ್ನಲ್ಲಿ ನಾನಿಲ್ಲ ಎಂದು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತೆ. ಅಧ್ಯಕ್ಷ ಸ್ಥಾನದ ಬದಲಾವಣೆ ಆಗಬೇಕೆಂದರೆ ಮೊದಲು ಆ ಸ್ಥಾನ ಖಾಲಿ ಆಗಬೇಕಲ್ವಾ? ಬದಲಾವಣೆ ಬದಲು ಅಧಿಕಾರ ವಿಸ್ತರಣೆಯೂ ಆಗಬಹುದಲ್ವಾ ಎಂದರು.

ಲೋಕಸಭೆ ಚುನಾವಣೆವರೆಗೆ ಡಿ.ಕೆ. ಶಿವಕುಮಾರ್‌ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂಬ ಎಐಸಿಸಿ ಹೈಕಮಾಂಡ್‌ ಘೋಷಣೆ ಅವಧಿ ಮುಗಿದ ಬೆನ್ನಲ್ಲೇ, ಜಾರಕಿಹೊಳಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ನಾನಿಲ್ಲ. ಅದು ಪಕ್ಷದ ವರಿಷ್ಠರ ವಿವೇಚನೆಗೆ ಬಿಟ್ಟ ವಿಚಾರ. ಹೊಸ ಅಧ್ಯಕ್ಷರ ನೇಮಕಕ್ಕೆ ರಾಜ್ಯ ಸುತ್ತಿದ್ದ ಹಾಗೂ ಸಮರ್ಥರಿಗೆ ಅವಕಾಶ ನೀಡಬೇಕು. ಮುಂದಿನ ನಾಲ್ಕು ವರ್ಷ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಶಕ್ತಿ ಇರುವವರು ಅಧ್ಯಕ್ಷರಾಗಲಿ ಎಂದು ಹೇಳಿದರು.

Related