ಗಿರಾಕಿ ನಾನು ಅಲ್ಲ: ಸಿದ್ದು

ಗಿರಾಕಿ ನಾನು ಅಲ್ಲ: ಸಿದ್ದು

ವಿಜಯನಗರ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಮಾತನಾಡಿದ ಮಾಜಿ ಸಿ.ಎಂ.ಸಿದ್ದರಾಮಯ್ಯ ಅವರು ತಮ್ಮ ಎದುರಾಳಿಗಳಿಗೆ ಎಚ್ಚರಿಕೆ ಕೊಟ್ಟು ತಿರುಗೇಟು ನೀಡಿದ್ದಾರೆ. ಅಧಿಕಾರ ಬರುತ್ತೆ ಹೋಗುತ್ತದೆ. ನನ್ನ ರಾಜಕೀಯ ಜೀವನದಲ್ಲಿ 13 ಚುನಾವಣೆ ಎದುರಿಸಿದ್ದೇನೆ, 5 ಚುನಾವಣೆ ಸೋತಿದ್ದೇನೆ. ಆದರೆ ಸೋತು ಮನೆಯಲ್ಲಿ ಕುಳಿತಿರಲಿಲ್ಲ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದೀನಿ. ಯಾರಿಗೂ ಹೆದರುವ ಗಿರಾಕಿ ನಾನು ಅಲ್ಲ. ಸುಮ್ಮ ಸುಮ್ಮನೆ ಹೆದರಿಸೋಕೆ ಬಂದರೆ ತೊಡೆ ತಟ್ಟೋದು ನನಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಯಾತ್ರಿ ನಿವಾಸ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾವೇರಿ ಮೀಸಲು ಕ್ಷೇತ್ರದ ಟಿಕೆಟ್ ಈರಪ್ಪ ಲಮಾಣಿ ಅವರಿಗೆ ಟಿಕೆಟ್ ಕೊಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಆದೆ ಇಲ್ಲಿ ನಾನು ಟಿಕೆಟ್ ಕೊಡಲು ಬಂದಿದ್ದಾನಾ? ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ರದ್ದು ಮಾಡಿ ಮಠದ ಕಾರ್ಯಕ್ರಮಕ್ಕೆ ಇಲ್ಲಿಗೆ ಬಂದಿದ್ದೇನೆ ಎಂದು ಕಾರ್ಯಕರ್ತರನ್ನು ಗದರಿದರು.

Related