ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರ ವಶದಲ್ಲಿದ್ದಾರೆ.
ಇನ್ನು ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ನಟ ದರ್ಶನವರು ನನಗೇನು ಗೊತ್ತಿಲ್ಲ, ನಾನೇನು ಮಾಡಿಲ್ಲ ಎಂದು ವಕೀಲರ ಮುಂದೆ ನಟ ದರ್ಶನ್ ಅವರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ನಮೋ ನೇತೃತ್ವದ ಎನ್ ಡಿಎ ಸರ್ಕಾರದಲ್ಲಿ ರಾಜ್ಯಕ್ಕೆ ಎಷ್ಟು ಸಚಿವ ಸ್ಥಾನ..?
ನಟ ದರ್ಶನ್ ಅವರಿಗೆ ಈಗಾಗಲೇ ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಲು ಎಲ್ಲ ರೀತಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಮಧ್ಯೆ ದರ್ಶನ್ ಅವರನ್ನು ವಕೀಲ ಅನಿಲ್ ಭೇಟಿ ಮಾಡಿದರು. ಈ ವೇಳೆ ದರ್ಶನ್ ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಂಬಂಧಿ ಸುಶಾಂತ್ ದರ್ಶನ್ ಅವರನ್ನು ಭೇಟಿಯಾದರು. ನಂತರ ಸಂಬಂಧಿ ಫೋನ್ ಮೂಲಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಜೊತೆ ಮಾತನಾಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್, ಪವಿತ್ರಾ ಗೌಡ ಜೊತೆ ವಿ. ವಿನಯ್, ಆರ್. ನಾಗರಾಜು, ಎಂ. ಲಕ್ಷ್ಮಣ್, ಎಸ್. ಪ್ರದೋಶ್, ಕೆ. ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್ ರಾಘು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.