ನನಗೆ ನಂದೇ ಹಾದಿ ಇದೆ: ಬಿ.ಸಿ ಪಾಟೀಲ್

ನನಗೆ ನಂದೇ ಹಾದಿ ಇದೆ: ಬಿ.ಸಿ ಪಾಟೀಲ್

ಹಾವೇರಿ: ಅವರು ಹೇಳಿದಾಗ ನಾವು ನಮ್ಮ ಸ್ಥಾನವನ್ನು ತ್ಯಾಗ ಮಾಡಿ ಬಂದಿದ್ದೇವೆ. ಈಗ ನಾವು ಮನೆಯಲ್ಲಿ ಕುಂತಿದ್ದೇವೆ ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಗೆ ನನಗೆ ಟಿಕೆಟ್ ನೀಡಬೇಕು ಎಂದು ಬಿ.ಸಿ ಪಾಟೀಲ್ ಅವರು ಪಟ್ಟು ಹಿಡಿದಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅವರಿಗೋಸ್ಕರ ಎಲ್ಲವನ್ನು ತ್ಯಾಗ ಮಾಡಿದ್ದೇವೆ ಆದರೆ ಅವರು ನಮಗೆ ಈಗ ಟಿಕೆಟ್ ಕೊಡಲೇಬೇಕು. ನಮಗೆ ಹೆದರಿಸುವುದು ಬೆದ್ರುಸೋದು ಗೊತ್ತಿಲ್ಲ. ಸೈಲೆಂಟ್ ಆಗಿ ಇದ್ದೀವಿ ಎಂದರೆ ಅದು ನಮ್ಮ ದೌರ್ಬಲ್ಯ ಎಂದು ಭಾವಿಸಬಾರದು. ಈಗಾಗಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ. ನಾನು ಹಾವೇರಿ ಹಾಗೂ ಗದಗ ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಹಾಗೆಂದು ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ. ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ. ಹೆಬ್ಬಾರ್, ಎಸ್‍.ಟಿ ಸೋಮಶೇಖರ್ ಹಾದಿ ಬೇಕಾಗಿಲ್ಲ ಎಂದಿದ್ದಾರೆ.

 

Related