ನಾನು ಎಲ್ಲಾ ಜಾತಿಯವರಿಗೂ ಮೀಸಲು : ಎಸ್.ವಿ.ರಾಮಚಂದ್ರ

ನಾನು ಎಲ್ಲಾ ಜಾತಿಯವರಿಗೂ ಮೀಸಲು : ಎಸ್.ವಿ.ರಾಮಚಂದ್ರ

ಹರಪನಹಳ್ಳಿ : ನಾನು ಕೇವಲ ಒಂದು ಜಾತಿಗೆ ಸೀಮಿತವಲ್ಲ ನಾನು ಎಲ್ಲಾ ಜಾತಿಯವರಿಗೂ ಮೀಸಲು. ನಿಮ್ಮೆಲ್ಲರ ಅಭಿಮಾನಕ್ಕೆ ನಾನೆಂದಿಗೂ ಚಿರಋಣಿ. ನಿಮ್ಮೆಲ್ಲರ ಸಹಕಾರದಿಂದಲೇ ಇಂದು ನಾನು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು. ಎಂದು ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಮಂಡಳಿಗೆ ನೂತನವಾಗಿ ಅಧ್ಯಕ್ಷರಾಗಿ ನೇಮಕವಾದ ಜಗಳೂರು ಕ್ಷೇತ್ರದ ಶಾಸಕ ಎಸ್.ವಿ. ರಾಮಚಂದ್ರ ಅವರಿಗೆ ಅವರ ಹುಟ್ಟೂರು ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ನಿಮ್ಮೆಲ್ಲರ ಆಶೀರ್ವಾದದಿಂದಲೇ ನಾನು ಈ ಸ್ಥಾನವನ್ನು ಅಲಂಕರಿಸಲು ಸಾಧ್ಯವಾಯಿತು. ನಮ್ಮ ನಾಯಕ ಬಿ.ಎಸ್. ಯಡಿಯೂರಪ್ಪನವರು ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ನನಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಭರವಸೆಯನ್ನು ಸಹ ನೀಡಿದ್ದಾರೆ. ನೀವೆಲ್ಲರೂ ಎಸ್ಟಿ ನಿಗಮದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೋರಿ ಶೆಟ್ಟಿ ಉಚ್ಚಂಗೆಪ್ಪ ಮಾತನಾಡಿ, ರಾಜ್ಯದಲ್ಲಿ 60 ಲಕ್ಷ ಜನಸಂಖ್ಯೆ ಇರುವ ವಾಲ್ಮೀಕಿ ನಾಯಕ ಸಮಾಜದ ಅಭಿವೃದ್ಧಿಯ ಹಿತದೃಷ್ಟಿಯಿಂದ ಜಗಳೂರು ಶಾಸಕಎಸ್.ವಿ. ರಾಮಚಂದ್ರಪ್ಪ ಅವರನ್ನು ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ರಾಜ್ಯದ ವಾಲ್ಮೀಕಿ ನಾಯಕ ಸಮಾಜದ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದರು.

Related