ನನ್ನ ಮೇಲೆ ಷಡ್ಯಂತ್ರ ನಡೆಸಿ ನನ್ನನ್ನು ಸೋಲಿಸಲಾಯಿತು: ವಿ ಸೋಮಣ್ಣ

ನನ್ನ ಮೇಲೆ ಷಡ್ಯಂತ್ರ ನಡೆಸಿ ನನ್ನನ್ನು ಸೋಲಿಸಲಾಯಿತು: ವಿ ಸೋಮಣ್ಣ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ಎಂದು ಈಗಾಗಲೇ ಬಿಜೆಪಿ ನಾಯಕರಿಗೆ ಗೊತ್ತಿದೆ ಮತ್ತು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗು ಕೂಡ ಗೊತ್ತು.

ಎಲ್ಲಾ ಸತ್ಯ ಅಸತ್ಯಗಳನ್ನು ಒಗ್ಗೂಡಿಸಿಕೊಂಡು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ನಾನು ಸಿಡಿದೆಳಬೇಕಾಗುತ್ತದೆ ಎಂದು ಮಾಜಿ ಸಚಿವ ವಿ ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನನ್ನ ಮೇಲೆ ಷಡ್ಯಂತ್ರ ನಡೆಸಿ ನನ್ನನ್ನು ಸೋಲಿಸಲಾಯಿತು. ಈ ಸೋಲಿಗೆ ಕಾರಣ ಯಾರೆಂದು ನನಗೂ ಕೂಡ ಗೊತ್ತು ಮತ್ತು ರಾಜ್ಯಾಧ್ಯಕ್ಷರಿಗೂ ಗೊತ್ತು. ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ನಾನು ಮುಂದಿನ ಹೆಜ್ಜೆ ಇಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.

 

Related