ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ: ಡಿಕೆ ಸುರೇಶ್

ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ: ಡಿಕೆ ಸುರೇಶ್

ಬೆಂಗಳೂರು: ಸತತ ಮೂರು ಬಾರಿಯಾಗಿ ಸಂಸದರಾಗಿ ಆಯ್ಕೆಯಾಗಿದ್ದ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಈ ಬಾರಿ ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಡಾ. ಮಂಜುನಾಥ್ ಅವರು ಈ ಬಾರಿ ಭರ್ಜರಿ ಜಯಭೇರಿಯನ್ನು ಭಾರಿಸಿದ್ದಾರೆ.

ಇನ್ನು ಹೀನಾಯವಾಗಿ ಸೋಲು ಅನುಭವಿಸಿರುವ ಹಾಲಿ ಸಂಸದ ಡಿಕೆ ಸುರೇಶ್ ಅವರು ಮಾತನಾಡಿ, 3 ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. 4ನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿದರು.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಗೆಲುವು ಖಚಿತವಾಗುತ್ತಿದ್ದಂತೆಯೇ ಸುರೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಇದನ್ನೂ ಓದಿ: ಕೋಟ ಶ್ರೀನಿವಾಸ್ ಪೂಜಾರಿಗೆ ಜಯಭೇರಿ

ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ‌ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಅವರು ಹೇಳಿದರು.

 

Related