ಯಾರೇ ಸಮಸ್ಯೆ ಹೇಳಿದರೂ ಬಗೆಹರಿಸುವ ಕೆಲಸ ಮಾಡುತ್ತೇನೆ: ಡಿಸಿಎಂ

ಯಾರೇ ಸಮಸ್ಯೆ ಹೇಳಿದರೂ ಬಗೆಹರಿಸುವ ಕೆಲಸ ಮಾಡುತ್ತೇನೆ: ಡಿಸಿಎಂ

ಬೆಂಗಳೂರು: ರಾಜ್ಯ ಸರ್ಕಾರ 2024 ರಿಂದ ಜನರ ಅನುಕೂಲಕ್ಕಾಗಿ ಜನಸ್ಪಂದನಾ ಕಾರ್ಯಕ್ರಮವನ್ನು ಜನವರಿ 3ರಿಂದ ಬೆಂಗಳೂರಿ ನಗರದ ಹಮ್ಮಿಕೊಳ್ಳಲಾಗುತ್ತಿದೆ.

(ಜನವರಿ 3 ಬುಧವಾ) ರಂದು ಕೆ ಆರ್ ಪುರ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಮಾಡಲಾಗಿತ್ತು. ಅದೇ ರೀತಿ ಇಂದು ಕೂಡ ಯಲಹಂಕ ದಲ್ಲೂ ಕೂಡ ಜನಸ್ಪಂದನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಜನಸ್ಪಂದನ ಕಾರ್ಯಕ್ರಮದ ಮೂಲಕ ಜನರಿಂದ ಸ್ವೀಕರಿಸಲಾದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಯಾರೇ ಸಮಸ್ಯೆ ಹೇಳಿದರೂ ಬಗೆಹರಿಸುವ ಕೆಲಸ ಮಾಡುತ್ತೇನೆ. ನಾಳೆ ಶಿವಾಜಿನಗರ, ಪುಲಕೇಶಿನಗರ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಮಾಡುತ್ತೇನೆ. ಬಳಿಕ ಹಂತ ಹಂತವಾಗಿ ಎಲ್ಲೆಡೆ ಕಾರ್ಯಕ್ರಮ ಮಾಡುತ್ತೇವೆ ಎಂದರು.

ನಮ್ಮ ಉದ್ದೇಶ ನಿಮ್ಮ ಋಣ ತೀರಿಸಬೇಕು ಎಂಬುದಾಗಿದೆ. ನಮ್ಮನ್ನು ನಂಬಿ ನಮಗೆ ಅವಕಾಶ ಕೊಟ್ಟಿದ್ದೀರಿ. ಅದರ ಋಣವನ್ನ ತೀರಿಸಬೇಕು. ಅಕ್ಕಿ ಒಂದು ಕಡೆ ಇರುತ್ತದೆ, ಅರಿಶಿನ ಒಂದು ಕಡೆ ಇರುತ್ತದೆ. ಎರಡು ಸೇರಿದಾಗ ಮಂತ್ರಾಕ್ಷತೆಯಾಗುತ್ತದೆ. ಜನರ ಬಳಿ ಹೋಗಿ ಸಮಸ್ಯೆ ಬಗೆಹರಿಸಲು ಯತ್ನಿಸಿದ್ದೇನೆ. ಆಗ ನನಗೆ ಪ್ರೆಷರ್ ಕೂಡ ಕಡಿಮೆಯಾಗುತ್ತದೆ ಎಂದರು.

 

Related