ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು..!

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು..!

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಒಂದಲ್ಲ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಆಗಾಗಿ ಸುದ್ದಿಯಾಗುತ್ತಲೇ ಇರುತ್ತಾರೆ.

ಹೌದು, ಐಎಎಸ್ ಅಧಿಕಾರಿ ರೋಹಿಣಿ ಸುಂದರಿ ಮತ್ತೆ ಇದೀಗ ಸುದ್ದಿಯಾಗಿದ್ದಾರೆ. ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿ ಭೂಮಿ ಕಬಳಿಕೆ ಮಾಡಿರುವ ಆರೋಪವನ್ನು ರೋಹಿಣಿ ಸಿಂಧೂರಿ ವಿರುದ್ಧ ಹೊರಿಸಿದ್ದಾರೆ.

ಯಲಹಂಕ ನ್ಯೂಟೌನ್ ಬಳಿ ಜಮೀನನ್ನು ರೋಹಿಣಿ ಒತ್ತುವರಿ ಮಾಡಿದ ಆರೋಪ ಇದ್ದು, ಈ ಬಗ್ಗೆ ದೂರು ನೀಡಿದ ಅಲಿ X ಖಾತೆಯಲ್ಲಿ ದೂರಿನ ಪ್ರತಿ ಅಪ್ಲೋಡ್ ಮಾಡಿದ್ದಾರೆ. ರೋಹಿಣಿ ಸಿಂಧೂರಿ, ಪತಿ ಸುಧೀರ್ ರೆಡ್ಡಿ, ಭಾಮೈದ ಮಧುಸೂಧನ್ ರೆಡ್ಡಿ ವಿರುದ್ಧ ದೂರು ದಾಖಲು ಮಾಡಲಾಗಿದೆ.

ಬೆಂಗಳೂರಿನ ಯಲಹಂಕ ನ್ಯೂಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಜಾಗವನ್ನು ಲಪಟಾಯಿಸಿದ್ದಾರೆಂದು ದೂರಿನಲ್ಲಿ ಅಲಿ ಉಲ್ಲೇಖಿಸಿದ್ದಾರೆ. 2022ರಲ್ಲಿ ಲಕ್ಕಿ ಅಲಿ ಈ ಸಂಬಂಧ ಯಲಹಂಕ ನ್ಯೂಟೌನ್ ಠಾಣೆಗೆ ದೂರು ನೀಡಿದ್ರು, ಈಗ ಲೋಕಾಯುಕ್ತಕ್ಕೆ‌ ಕೊಟ್ಟ ದೂರನ್ನ ಡಿಜಿ/ಐಜಿಪಿಗೆ ಟ್ಯಾಗ್ ಮಾಡಿದ್ದಾರೆ.

 

Related