ನಮ್ಮ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ: ಎಚ್.ಕೆ.ಪಾಟೀಲ್

ನಮ್ಮ ಪಕ್ಷ ಗೆದ್ದರೇ ಪ್ರಜಾಪ್ರಭುತ್ವ ಗೆದ್ದಂತೆ: ಎಚ್.ಕೆ.ಪಾಟೀಲ್

ಬೆಳಗಾವಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಎಲ್ಲಾ ಅಭ್ಯರ್ಥಿಗಳು ಬರದಿಂದ ಪ್ರಚಾರದಲ್ಲಿ ತೊಡಗಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ ಪಕ್ಷ 18ರಿಂದ 20 ಕ್ಷೇತ್ರ ಗೆಲ್ಲುವ ಬರೆಸ್ಥೆಯನ್ನು ಹೊಂದಿದ್ದು, ಈ ಬಾರಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಪ್ರಜಾಪ್ರಭುತ್ವ ಗೆದ್ದಂತೆ ಎಂದು ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ರೆಡ್ಡಿ ಸಮಾಜಗಳ ಸೇರಿದಂತೆ ವಿವಿಧ ಮುಖಂಡರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ರಾಜ್ಯಕ್ಕೆ ನ್ಯಾಯ ಒದಗಿಸುವ ದಿಸೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಬೇಕಿದೆ. ಇಲ್ಲವಾದಲ್ಲಿ ಪ್ರಜಾಪ್ರಭುತ್ವ ದೊಡ್ಡ ಅಪಾಯದಲ್ಲಿ ಸಿಲುಕಲಿದೆ ಎಂದು ಎಚ್ಚರಿಕೆ ನೀಡಿದರು.

ಬಡಜನರ ಒಳಿತಿಗಾಗಿ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಇಡೀ ದೇಶದಲ್ಲೇ ಅಪರೂಪದ ಯೋಜನೆ ಎಂದರೇ ಗೃಹಲಕ್ಷ್ಮಿ ಯೋಜನೆ. ಇದರ ಅನುಷ್ಠಾನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶ್ರಮ ಸಾಕಷ್ಟಿದೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳು ಶೇ.98 ರಷ್ಟು ಜನರಿಗೆ ತಲುಪುತ್ತಿವೆ. ಅದರಲ್ಲೂ ಗೃಹಲಕ್ಷ್ಮಿ ಯೋಜನೆ ಒಂದು ಕ್ರಾಂತಿಕಾರಿ ಯೋಜನೆಯಾಗಿದೆ. ಅದರ ಯಶಸ್ಸಿಗೆ ಹಗಲಿರುಳು ಶ್ರಮಿಸಿದ್ದಾರೆ ಎಂದು ಶ್ಲಾಘಿಸಿದರು.

 

Related