ಎಚ್ ಡಿಕೆಗೆ ನಮ್ಮನ್ನು ಸ್ಮರಿಸದೆ ಹೋದರೆ ದಿನಚರಿ ನಡೆಯಲ್ಲ ಡಿ.ಕೆ.ಸುರೇಶ್

ಎಚ್ ಡಿಕೆಗೆ ನಮ್ಮನ್ನು ಸ್ಮರಿಸದೆ ಹೋದರೆ ದಿನಚರಿ ನಡೆಯಲ್ಲ ಡಿ.ಕೆ.ಸುರೇಶ್

ಬೆಂಗಳೂರು: ಮೊದಲಿನಿಂದಲೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಾಗೂ ನನ್ನನ್ನು ಸ್ಮರಿಸದೆ ಹೋದರೆ ಕುಮಾರಸ್ವಾಮಿಯವರಿಗೆ ರಾಜಕಾರಣ ಹಾಗೂ ದಿನಚರಿ ನಡೆಯುವುದೇ ಇಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ರವರು ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಪ್ರತಿ ವಿಚಾರದಲ್ಲೂ ನಮ್ಮ ಹೆಸರನ್ನು ಎಳೆದುತರುತ್ತಾರೆ. ಚನ್ನಪಟ್ಟಣ ತ್ಯಜಿಸಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ, ಸಭೆಗಳ ಬಗ್ಗೆ ಮಾಧ್ಯಮಗಳಲ್ಲಿ ದಾಖಲೆಗಳಿವೆ. ಅವರು ಚನ್ನಪಟ್ಟಣ ಎಷ್ಟು ಬಾರಿ ಬಂದಿದ್ದಾರೆ ಎಂಬ ದಾಖಲೆ ನಿಮ್ಮ ಬಳಿ ಇದೆ. ನೀವೇ ಪರಿಶೀಲನೆ ಮಾಡಿ ಜನರ ಮುಂದೆ ಇಡಿ” ಎಂದು ಮನವಿ ಮಾಡಿದರು. ಇದನ್ನೂ ಓದಿ:ಸೋನಿಯಾ ಗಾಂಧಿ, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಆರ್.ಅಶೋಕ್

ಜನ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದು ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿದ್ದಾರೆ. ಅವರು ಜನರನ್ನು ಹಾಗು ಅಧಿಕಾರಿಗಳನ್ನು ಮೊದಲಿನಿಂದಲೂ ಬೆದರಿಸಿಕೊಂಡು ಬಂದಿದ್ದು, ಈಗಲೂ ಅದನ್ನೇ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಅವರು ಸುಳ್ಳು ಹೇಳಿ ಜನರ ದಾರಿತಪ್ಪಿಸುವುದನ್ನು ಕಡಿಮೆ ಮಾಡಿಕೊಳ್ಳಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

 

Related