ರಾಜ್ಯದ ರಾಜಧಾನಿಯಲ್ಲಿ ಸೆಕ್ಷನ್ 144 ಜಾರಿ

ರಾಜ್ಯದ ರಾಜಧಾನಿಯಲ್ಲಿ ಸೆಕ್ಷನ್ 144 ಜಾರಿ

ದೆಹಲಿ: ಕರ್ನಾಟಕ ರಾಜಧಾನಿ ದೆಹಲಿಯಲ್ಲಿಂದು ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಸಯುಕ್ತ ಕಿಸನ್ ಮೋರ್ಚಾ ಸೇರಿದಂತೆ ಹಲವು ರೈತ ಸಂಘಟನೆಗಳು ದೆಹಲಿ ಚಲೋ ಮೆರವಣಿಗೆಯನ್ನು ಇಂದಿನಿಂದ ಪ್ರಾರಂಭ ಮಾಡಿದ್ದು, ಈ ಪ್ರತಿಭಟನೆಯಲ್ಲಿ ಕರ್ನಾಟಕ ಸೇರಿದಂತೆ ರಾಜಸ್ಥಾನ್, ಪಂಜಾಬ್ ಇನ್ನಿತರ ರಾಜ್ಯದ ರೈತರು ಭಾಗಿಯಾಗಲಿದ್ದಾರೆ.

ಇನ್ನೂ ರೈತರನ್ನು ಪ್ರತಿಭಟನೆ ಮಾಡದಂತೆ ತಡೆಯಲು ದೆಹಲಿ ಪೊಲೀಸ್ ಅಧಿಕಾರಿಗಳು ವಿವಿಧ ಕ್ರಮಗಳನ್ನು ಕೈಗೊಂಡಿದ್ದಾರೆ.

ಪೊಲೀಸರ ವಿವಿಧ ಕ್ರಮಗಳನ್ನು ಕೈಗೊಂಡಿದ್ದರು ಸಹ ರೈತರು ಈ ಪ್ರತಿಭಟನೆಯನ್ನು ಕೈ ಬಿಡದೆ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿ ಗೇಟ್ ಮತ್ತು ಮುಳ್ಳಿನ ತಂತಿಯನ್ನು ಕಿತ್ತು ಹಾಕಿ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಇನ್ನು ಪ್ರತಿಭಟನೆ ತಡೆಯಲು ಹೆದ್ದಾರಿಯಲ್ಲಿ ಹಾಕಲಾಗಿದ್ದ ತಡೆಗೋಡೆಯನ್ನು ರೈತರು ದ್ವಂಸ ಮಾಡಿ ಘಗ್ಗರ್ ನದಿಗೆ ಎಸೆದಿದ್ದಾರೆ.

ಹಲವು ದಿನಗಳಿಂದ ರೈತ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹತ್ತಿಕ್ಕಲು ಪಂಜಾಬ್‌ನ ಗಡಿಯಲ್ಲಿರುವ ಅಂಬಾಲಾ, ಜಿಂದ್, ಫತೇಹಾಬಾದ್, ಕುರುಕ್ಷೇತ್ರ ಮತ್ತು ಸಿರ್ಸಾದಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿದ್ದರೆ, ರಸ್ತೆಗಳ ಮೇಲೆ ಕಬ್ಬಿಣದ ಮೊಳೆಗಳು ಮತ್ತು ಮುಳ್ಳುತಂತಿಗಳನ್ನು ಅಳವಡಿಸಲಾಗಿದೆ.

ಇದರಿಂದ ರೈತರ ಟ್ರ್ಯಾಕ್ಟರ್​ಗಳು ದೆಹಲಿಗೆ ಪ್ರವೇಶಿಸದಂತೆ ತಡೆ ಒಡ್ಡಲಾಗುತ್ತಿದೆ. ಈ ಮಧ್ಯೆ ದೆಹಲಿ ಚಲೋ ಬೆಂಬಲಿಸಿ ಕರ್ನಾಟಕ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ಬರುತ್ತಿರುವ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related