ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾರಾಮಾರಿ

ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾರಾಮಾರಿ

ವಿಜಯಪುರ : ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡು ತಂಡಗಳ ಆಟಗಾರರು ಅಂಪೈರ್ ತೀರ್ಮಾನದ ವಿಷಯದಲ್ಲಿ ಹೊಡೆದಾಡಿಕೊಂಡಿದ್ದು, ಹಲವರು ಗಾಯಗೊಂಡು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿದ್ದು, ಪೊಲೀಸರು ಪುರಸಭೆ ಉಪಾಧ್ಯಕ್ಷ ಮುಸ್ತಫಾ ಚೌಧರಿ ಸೇರಿದಂದತೆ 10 ಜನರನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರೆ ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಘಟನೆಯಲ್ಲಿ ಎರಡೂ ಕಡೆಯ 51 ಜನರ ವಿರುದ್ಧ ದೂರು-ಪ್ರತಿ ದೂರು ತಾಳಿಕೋಟೆ ಪೊಲೀಸರು ದಾಖಲಿಸಿಕೊಂಡಿದ್ದಾರೆ.

Related