ಜಾರ್ಖಂಡ್ನಲ್ಲಿ ಗಾಂಧಿ ಪ್ರತಿಮೆ ಧ್ವಂಸ

ಜಾರ್ಖಂಡ್ನಲ್ಲಿ ಗಾಂಧಿ ಪ್ರತಿಮೆ ಧ್ವಂಸ

ಹಜಾರಿಬಾಗ್, ಫೆ.10 :  ಜಾರ್ಖಂಡ್ನ ಹಜಾರಿಬಾಗ್ನಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 72ನೇ ಪುಣ್ಯ ತಿಥಿಯಾಗಿ 10 ದಿನ ಕಳೆದಿಲ್ಲ.
ಈ ಮಧ್ಯೆ ಅವರ ಪ್ರತಿಮೆಯೊಂದು ಧ್ವಂಸಗೊಂಡಿರುವ ಘಟನೆ ಜಾರ್ಖಂಡ್ನಲ್ಲಿ ವರದಿಯಾಗಿದೆ. ಜಾರ್ಖಂಡ್ನ ಹಜಾರಿಬಾಗ್ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಮೆ ಸ್ವತಃ ತಾನೇ ಬಿದ್ದಿದೆಯೋ ಅಥವಾ ಯಾರಾದರೂ ಧ್ವಂಸಗೊಳಿಸಿದ್ದಾರೋ ಎಂಬ ತನಿಖೆಯನ್ನು ನಡೆಸುತ್ತಿದ್ದಾರೆ.
ಇನ್ನು ಸ್ಥಳದಲ್ಲಿರುವ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇನ್ನು ಘಟನೆ ಬಗ್ಗೆ ಶಾಸಕ ಮನೀಶ್ ಜೈಸ್ವಾಲ್ ಕೂಡ ತೀವ್ರವಾಗಿ ಖಂಡಿಸಿದ್ದಾರೆ.

Related