ಬಸ್, ಟ್ರಕ್ ಡಿಕ್ಕಿ 13 ಬಲಿ

ಬಸ್, ಟ್ರಕ್  ಡಿಕ್ಕಿ 13 ಬಲಿ

ಫಿರೋಜಾಬಾದ್, ಫೆ. 13 : ಖಾಸಗಿ ಬಸ್, ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಫಿರೋಜಾಬಾದ್’ನ ನಗ್ಲಾ ಖಂಗಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, 13 ಮಂದಿ ದುರ್ಮರಣವನ್ನಪ್ಪಿ, 31ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೈಫೈ ಆಸ್ಪತ್ರೆಯ ತುರ್ತುಚಿಕಿತ್ಸಾ ಘಟಕ ವೈದ್ಯಾಧಿಕಾರಿ ಡಾ.ವಿಶ್ವ ದೀಪಕ್ ಮಾತನಾಡಿ, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. 31 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಒಟ್ಟು 40-45 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.

Related