ಕೋವಿಡ್ ಆಸ್ಪತ್ರೆ ಉದ್ಘಾಟಿಸಿದ ;ಸಿಎಂ

ಕೋವಿಡ್ ಆಸ್ಪತ್ರೆ ಉದ್ಘಾಟಿಸಿದ ;ಸಿಎಂ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಸಿ.ವಿ.ರಾಮನ್ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಹತ್ತಿರ ಇರುವ ಎಂಡೋಕ್ರೈನಾಲಜಿ ಸೆಂಟರ್ ಆಸ್ಪತ್ರೆಯನ್ನು ಕೊರೊನಾ ಸೊಂಕಿತರ ಚಿಕಿತ್ಸೆಗಾಗಿ 140 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಆಗಿಪರಿವರ್ತಿಸಿದೆ ಆಸ್ಪತ್ರೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು.

140 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ 5 ಲೀಟರ್ ಸಾಮರ್ಥ್ಯದ 30 ಹಾಗೂ 10 ಲೀಟರ್ ಸಾಮರ್ಥ್ಯದ 25 ಹಾಸಿಗೆಗಳು ಸೋಂಕಿತರ ಚಿಕಿತ್ಸೆಗೆ ಲಭ್ಯವಾಗಲಿದೆ. ಈ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ 30 ಹೆಚ್.ಡಿ.ಯು ಹಾಸಿಗೆಗಳ ಸೌಕರ್ಯವನ್ನು ಕಲ್ಪಿಸಲಾಗುವುದು ಎಂದು ವಸತಿ ಸಚಿವ ಸೋಮಣ್ಣ ತಿಳಿಸಿದ್ದಾರೆ.

ಸಿ.ವಿ.ರಾಮನ್ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ 100 ಹಾಸಿಗೆಗಳ ಸುಸಜ್ಜಿತ ಕೋವಿಡ್ ಆಸ್ಪತ್ರೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸುವ ಮೂಲಕ ಈ ಭಾಗದ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುತ್ತಿದ್ದಾರೆ ಎಂದೂ ಸಚಿವ ಸೋಮಣ್ಣ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪೂರ್ವ ವಲಯದ ಕೋವಿಡ್ ಉಸ್ತುವಾರಿ ಹೊತ್ತಿರುವ ವಸತಿ ಸಚಿವ ವಿ.ಸೋಮಣ್ಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸ್ಥಳೀಯ ಸಂಸದರು, ಶಾಸಕರ ಉಪಸ್ಥಿತಿಯಲ್ಲಿ ಇದ್ದರು.

Related