ಕಾಂಗ್ರೆಸ್ ಪಕ್ಷದ ಜನಸಂಪರ್ಕ ಕಛೇರಿ ಉದ್ಘಾಟನೆ

ಕಾಂಗ್ರೆಸ್ ಪಕ್ಷದ ಜನಸಂಪರ್ಕ ಕಛೇರಿ ಉದ್ಘಾಟನೆ

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಸೌಮ್ಯ ರೆಡ್ಡಿರವರ ಜನಸಂಪರ್ಕ ಕಛೇರಿ ಉದ್ಘಾಟನೆ ಸಮಾರಂಭವನ್ನು ಇಂದು ಗುರುವಾರ ಜೂನ್‌ 27 ರಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಮಾಜಿ ಶಾಸಕರಾದ ಸೌಮ್ಯರೆಡ್ಡಿ, ಜಯನಗರ ಗ್ಯಾರಂಟಿ ಯೋಜನೆ ಆನುಷ್ಠಾನ ಸಮಿತಿ ಅಧ್ಯಕ್ಷರು, ಆಡಳಿತ ಪಕ್ಷದ ನಾಯಕರಾದ ಎನ್.ನಾಗಾರಾಜುರವರು, ಮಾಜಿ ಪಾಲಿಕೆ ಸದಸ್ಯ ಮಹಮದ್ಮ ರಿಜ್ವಾನ್ ರವರು ಜನಸಂಪರ್ಕ ಕಛೇರಿ ಲೋಕರ್ಪಣೆ ಮಾಡಿದರು.

ಮಾಜಿ ಶಾಸಕಿಯಾದ ಸೌಮ್ಯರೆಡ್ಡಿರವರು ಮಾತನಾಡಿ, ಜನ ಸಾಮಾನ್ಯರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಹಕಾರ ಬೆಂಬಲ ಲೋಕಸಭಾ ಚುನಾವಣೆ ನಿರಂತರ ಲಭಿಸಿದ ಕಾರಣದಿಂದ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತ ಸಿಕ್ಕಿದೆ. ಜನರ ಸಮಸ್ಯೆ ನಿವಾರಣೆಯಾಗಬೇಕು ಮತ್ತು ನಿರಂತರ ಜನರ ನಡುವೆ ಇರಬೇಕು ಎಂದು ಜನಸಂಪರ್ಕ ಕಛೇರಿ ಆರಂಭಿಸಲಾಗಿದೆ. ಇದನ್ನೂ ಓದಿ: ಡಿ ಗ್ಯಾಂಗ್ ಪ್ರಕರಣದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ..!

5 ಗ್ಯಾರಂಟಿ ಯೋಜನೆಗಳು ಜಯನಗರ ವಿಧಾನಸಭಾ ಕ್ಷೇತ್ರದ ಪ್ರತಿ ಕುಟುಂಬಗಳಿಗೆ ತಲುಪಿಸಲಾಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರವಿದೆ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬೇಕಾದ ಅಭಿವೃದ್ದಿ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಎನ್.ನಾಗರಾಜುರವರು ಮಾತನಾಡಿ, ಜಯನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಅದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಷಡ್ಯಂತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಯಿತು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳಿಸಿದೆ. ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿ ಪ್ರತಿ ಮನೆಗಳಿಗೆ ತಲುಪಿದೆ. ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.

Related