ಮತ್ತೊಂದು ವಿಶ್ವ ದಾಖಲೆ ಸೃಷ್ಟಿಸಿದ ಭಾರತದ ಕ್ರಿಕೆಟಿಗ

ಮತ್ತೊಂದು ವಿಶ್ವ ದಾಖಲೆ ಸೃಷ್ಟಿಸಿದ ಭಾರತದ ಕ್ರಿಕೆಟಿಗ

ಭಾರತದ ಕ್ರಿಕೆಟ್ ಆಟಗಾರರಲ್ಲಿ ದಾಖಲೆ ಮೇಲೆ ದಾಖಲೆ ಸೃಷ್ಟಿಸುತ್ತಿರುವ ಕಿಂಗ್ ಕೊಹ್ಲಿ ಈಗ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದ್ದಾರೆ.

ಕ್ರಿಕೆಟ್ ಇತಿಹಾಸದಲ್ಲಿ ಭಾರತದಲ್ಲಿ ಅತಿ ಹೆಚ್ಚು ಪ್ರಶಸ್ತಿಯನ್ನು ಗಳಿಸಿದ ಹೆಗ್ಗಳಿಕೆ ವಿರಾಟ್ ಕೊಹ್ಲಿ ಗೆ ಸಿಕ್ಕಿದೆ.

ಹೌದು, ವಿರಾಟ್ ಕೊಹ್ಲಿ 2023ರ ಐಸಿಸಿ ಏಕದಿನ ಆಟಗಾರರ ಪ್ರಶಸ್ತಿ ಒದಗಿ ಬಂದಿದೆ. ಇದರೊಂದಿಗೆ ಅತೀ ಹೆಚ್ಚು ಬಾರಿ ಏಕದಿನ ಆಟಗಾರನ ಪ್ರಶಸ್ತಿ ಪಡೆದ ದಾಖಲೆಯೊಂದು ಕಿಂಗ್ ಕೊಹ್ಲಿ ಪಾಲಾಗಿದೆ. ವಿರಾಟ್ ಕೊಹ್ಲಿ ಇದುವರೆಗೆ 4 ಬಾರಿ ಐಸಿಸಿ ಏಕದಿನ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಒಟ್ಟು 10 ಬಾರಿ ICC ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ವಿಶ್ವದ ಯಾವುದೇ ಆಟಗಾರ ಇಷ್ಟೊಂದು ಪ್ರಶಸ್ತಿ ಪಡೆದಿಲ್ಲ ಎಂಬುದು ವಿಶೇಷ.

2012, 2017, 2018 ಮತ್ತು 2023 ರಲ್ಲಿ ವಿರಾಟ್ ಕೊಹ್ಲಿ ಐಸಿಸಿ ಏಕದಿನ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗೆಯೇ 2018 ರಲ್ಲಿ ಐಸಿಸಿ ಟೆಸ್ಟ್ ಆಟಗಾರ ಪ್ರಶಸ್ತಿಗೂ ಭಾಜನರಾಗಿದ್ದರು. ಇನ್ನು 2017 ಮತ್ತು 2018 ರಲ್ಲಿ ವಿರಾಟ್ ಕೊಹ್ಲಿ ಐಸಿಸಿಯ ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದಿದ್ದರು. ಇದಲ್ಲದೆ 2010 ರಲ್ಲಿ ಕಿಂಗ್ ಕೊಹ್ಲಿ ಐಸಿಸಿ ದಶಕದ ಕ್ರಿಕೆಟಿಗ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದರು.

ಹಾಗೆಯೇ 2010 ರಲ್ಲಿ ದಶಕದ ಅತ್ಯುತ್ತಮ ಏಕದಿನ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು. ಇನ್ನು 2019 ರಲ್ಲಿ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿಗೂ ಭಾಜನರಾಗಿದ್ದರು. ಈ ಮೂಲಕ ಒಟ್ಟು 10 ಐಸಿಸಿ ಪ್ರಶಸ್ತಿಗಳನ್ನು ಪಡೆದ ವಿಶ್ವದ ಏಕೈಕ ಆಟಗಾರ ಎಂಬ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

 

Related