ಚುನಾವಣೆ ಫಲಿತಾಂಶದ ದಿನ ಭಾರತೀಯರು ಕಾಂಗ್ರೆಸ್‌ಗೆ ಕಪಾಳ ಮೋಕ್ಷ ಮಾಡಲಿದ್ದಾರೆ: ಸುಧಾಕರ್

ಚುನಾವಣೆ ಫಲಿತಾಂಶದ ದಿನ ಭಾರತೀಯರು ಕಾಂಗ್ರೆಸ್‌ಗೆ ಕಪಾಳ ಮೋಕ್ಷ ಮಾಡಲಿದ್ದಾರೆ: ಸುಧಾಕರ್

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ರಾಜ್ಯ ಮಾತ್ರವಲ್ಲದೇ ಇಡೀ ದೇಶದಾದ್ಯಂತ ದಿನದಿಂದ ದಿನಕ್ಕೆ ಸುಡುಬಿಸಿಲಿನಂತೆ ರಂಗೆ ಇರುತ್ತಿದ್ದು ಎಲ್ಲಾ ಅಭ್ಯರ್ಥಿಗಳು ಬರದಿಂದ ಪ್ರಚಾರವನ್ನು ಕೈಗೊಂಡಿದ್ದಾರೆ.

ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ಡಾ. ಸುಧಾಕರ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ.

ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡುತ್ತಿರುವ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಹಳೇಹಳ್ಳಿ, ಶ್ಯಾಂಪುರ, ಗೌಡಗೆರೆ, ಪುರ, ಜರಬಂಡಹಳ್ಳಿ, ಮಿಣಕನಗುರ್ಕಿ, ಮಂಚೇನಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ಈ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ 400 ಮೀರಿ ಸ್ಥಾನಗಳು ಲಭ್ಯವಾಗಲಿದೆ.

ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳಿಗೆ 40 ಸ್ಥಾನ ಲಭ್ಯವಾಗಲಿದೆ. ಮೋದಿಗೆ ಜೈಕಾರ ಹಾಕುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಾರೆ. ಆದರೆ ಫಲಿತಾಂಶದ ದಿನ ಭಾರತೀಯರು ಕಾಂಗ್ರೆಸ್‌ಗೆ ಕಪಾಳ ಮೋಕ್ಷ ಮಾಡಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ‌ಮೋದಿಯವರ ಸಮಾಗಮಕ್ಕೆ‌ ಜನರು ಮತ ನೀಡಲಿದ್ದಾರೆ ಎಂದರು. ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಹಣ ಖಾಲಿ ಮಾಡಿಕೊಂಡಿದೆ. ನಂತರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ. ಇವರು ಬಂದಾಗೆಲ್ಲ ಬರಗಾಲ ಬರುತ್ತದೆ ಎಂದರು.

 

Related