ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ‘ಇಂದಿರಾ ಕ್ಯಾಂಟೀನ್’

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ‘ಇಂದಿರಾ ಕ್ಯಾಂಟೀನ್’

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿರಾ ಕ್ಯಾಂಟೀನ್ ಗಳು ಈಗಾಗಲೇ ಕೆಲವು ಏರಿಯಾಗಳಲ್ಲಿ ಪ್ರಾರಂಭವಾಗಿವೆ.

ಇನ್ನೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ  ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅನ್ನು ತೆರೆಯಲು ಬಿಬಿಎಂಪಿ ಮುಂದಾಗಿದೆ ಎಂದು ಹೇಳಲಾಗುತ್ತಿದೆ

ಹವದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕೆಟ್ ಫ್ರೆಂಡ್ಲಿ ‘ಇಂದಿರಾ ಕ್ಯಾಂಟೀನ್’ ಗಳ ತೆರಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ.

ಸೋಮವಾರವಷ್ಟೇ ವಿವಿಧ ಖಾಸಗಿ ಕ್ಯಾಬ್ ಯೂನಿಯನ್‌ಗಳ ಪ್ರತಿನಿಧಿಗಳು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರನ್ನು ಭೇಟಿ ಮಾಡಿ, ವಿಮಾನ ನಿಲ್ದಾಣದ ಹೊರಗೆ ಇಂದಿರಾ ಕ್ಯಾಂಟೀನ್ ಗಳ ತೆರೆಯುವಂತೆ ಮನವಿ ಮಾಡಿಕೊಂಡಿದ್ದರು.

ವಿಮಾನ ನಿಲ್ದಾಣದ ಒಳಗೆ ಆಹಾರ ಸಿಗುತ್ತದಾದರೂ, ಆಹಾರ ಪದಾರ್ಥಗಳು ದುಬಾರಿಯಾಗಿದೆ. ಹೀಗಾಗಿ ವಿಮಾನ ನಿಲ್ದಾಣದ ಹೊರಗೆ ಇಂದಿರಾ ಕ್ಯಾಂಟೀನ್ ತೆರೆಯುವಂತೆ ಮನವಿ ಮಾಡಿಕೊಂಡಿದ್ದರು.

ಈ ವೇಳೆ ಸಚಿವರು ವಿಮಾನ ನಿಲ್ದಾಣದ ಹೊರಗೆ ಒಂದು ಅಥವಾ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದರು.

ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆದರೆ, ಕೇಲವ ಕ್ಯಾಬ್ ಚಾಲಕರು ಮಾತ್ರವಲ್ಲ, ಇತರರಿಗೂ ಪ್ರಯೋಜನವಾಗಲಿದೆ. ಎಲ್ಲರ ಹಿತದೃಷ್ಟಿಯಿಂದ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಕೈಗೆಟಕುವ ದರದಲ್ಲಿ ಆಹಾರವನ್ನು ಒದಗಿಸಲು ನಾವೂ ಕೂಡ ಬಯಸುತ್ತಿದ್ದೇವೆ. ಕ್ಯಾಂಟೀನ್‌ಗಳ ಸ್ಥಾಪನೆಗೆ ಜಾಗವನ್ನು ಮೀಸಲಿಡಲು ಬಿಬಿಎಂಪಿ ಮೂಲಕ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ರೆಡ್ಡಿ ಹೇಳಿದ್ದರು.

 

Related