ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಇಂದಿರಾ ಕ್ಯಾಂಟೀನ್‌ಗಳ” ಲೋಕಾರ್ಪಣೆ:

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ “ಇಂದಿರಾ ಕ್ಯಾಂಟೀನ್‌ಗಳ” ಲೋಕಾರ್ಪಣೆ:

ಬೆಂಗಳೂರು: ಕರ್ನಾಟಕ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಿ-7, ವಾಹನ ಪಾರ್ಕಿಂಗ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವರದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಲೋಕಾರ್ಪಣೆಗೊಳಿಸಿ ಉಪಹಾರ ಸೇವಿಸಿದರು.

ಈ ವೇಳೆ ಮಾನ್ಯ ಆಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಹೆಚ್ ಮುನಿಯಪ್ಪ, ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್, ಪೌರಾಡಳಿತ ಹಾಗೂ ಹಜ್ ಸಚಿವರಾದ ಶ್ರೀ ರಹೀಂ ಖಾನ್, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related