ಮಕ್ಕಳಿಗೆ ಶಿಕ್ಷಣದಲ್ಲಿ ಅನ್ಯಾಯ

ಮಕ್ಕಳಿಗೆ ಶಿಕ್ಷಣದಲ್ಲಿ ಅನ್ಯಾಯ

ದೇವದುರ್ಗ: ಕೊರೋನಾದಿಂದ ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಣ ಕುಂಠಿತವಾಗಿದ್ದು ಇದರಿಂದ ಬಡ ಮತ್ತು ಮಧ್ಯಮವರ್ಗದ ಮಕ್ಕಳು ಶಿಕ್ಷಣ ದಿಂದ ವಂಚಿತರಾಗಿದ್ದಾರೆ. ಸರ್ಕಾರ ಜಾರಿಗೆ ತಂದ ವಿದ್ಯಾಗಮನ ಯೋಜನೆಯಿಂದ ಯಾವುದೇ ಪ್ರಯೋಜನೆಯಿಲ್ಲ ಇದನ್ನು ನಾವು ಸ್ವಾಗತಿಸುವುದಿಲ್ಲ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಜಯಶ್ರೀ ಅವರು ಹೇಳಿದರು.
ಡಾನ್ ಬಾಸ್ಕೋ ಶಾಲೆಯಲ್ಲಿ ನಡೆದ ಮಕ್ಕಳ ಹಕ್ಕುಗಳ ಸಂರಕ್ಷಣ ಮತ ತಾಲೂಕು ಮಟ್ಟದ ಅಧಿಕಾರಿಗಳ ಸಮನ್ವಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. 18 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿ ಸರ್ಕಾರಿ ಶಾಲೆಗಳನ್ನು ತೆರೆಯಬೇಕು, ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಲ್ಲಿ ಆನ್‌ಲೈನ್ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಬೇಕು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆನ್‌ಲೈನ್ ತರಗತಿಗಳು ನಡೆಸುತ್ತಿ ಮಕ್ಕಳಿಗೆ ಅನ್ಯಾಯ ಮಾಡಿದಂತೆ ಎಂದರು.
ವ್ಯಾಕ್ಸಿನ್ ನೀಡದೆ ಶಾಲೆಗಳನ್ನು ತೆರೆಯುವುದು ಮಕ್ಕಳ ಜೀವದ ಜೊತೆ ಆಟವಾಡಿದಂತೆ ಆಗುತ್ತದೆ. ಹಾಗಾಗಿ ಸರ್ಕಾರ ಶಾಲೆಗಳನ್ನು ತೆರೆಯುವ ಮುನ್ನ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕ್ರಮಗಳನ್ನು ಅನುಸರಿಸಬೇಕು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಮಾಡದಂತೆ ತಡೆಯಲು ಪಾಲಕರು, ಸಮಾಜ ಮತ್ತು ಸಂಘ ಸಂಸ್ಥೆಗಳು, ಅಧಿಕಾರಿಗಳು ಸಮನ್ವಯತೆ ಸಮಿತಿಯಿಂದ ಜನರಲ್ಲಿ ಹರಿವು ಮೂಡಿಸುವ ಕಾರ್ಯವನ್ನು ಮಾಡಬೇಕು. ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು, ಮಕ್ಕಳ ಶಿಕ್ಷಣವನ್ನು ಪಡೆಯಲು ಸಹಕಾರ ಮಾಡಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಸವರಾಜ ಬ್ಯಾಗವಾಟ್, ಸಭೆಯ ಅಧ್ಯಕ್ಷತೆ ತಹಸೀಲ್ದಾರ ಶ್ರೀ ನಿವಾಸ ಚಾಪೆಲ್ ವಹಿಸಿಕೊಂಡಿದ್ದರು, ಮುಖ್ಯ ಅಥಿತಿಗಳಾಗಿ ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿ ಸೈಯ್ಯದ್ ಪಾಷ, ,ಸಿಪಿಐ ಆರ್ .ಎಮ್ .ನಧಾಫ್ , ಪರಿಶಿಷ್ಟ ಪಂಗಡ ವಲಯ ಅಧಿಕಾರಿ ಕೆ ರಾಘವೇಂದ್ರ , ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಯೋಜನಾಧಿಕಾರಿ ವೆಂಕಟಪ್ಪ , ಫಾ ಕುರಿಯಾಕೋಸ್ ಸಂಪನ್ಮೂಲ ವ್ಯಕ್ತಿ ಗಳಾದ ಕಿರುಲಿಂಗಪ್ಪ ,ಮತ್ತು ಸಿದ್ದಲಿಂಗಪ್ಪ ಕಾಕರಗಲ್ ಇದ್ದರು.

Related