ರೈತರ ಬೆಂಬಲ ಬೆಲೆಗೆ ಒತ್ತಾಯ

ರೈತರ ಬೆಂಬಲ ಬೆಲೆಗೆ ಒತ್ತಾಯ

ಕೊಪ್ಪಳ : ರಾಜ್ಯದ ಮುಖ್ಯಮಂತ್ರಿಗಳಿಗೆ ತಮ್ಮ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸರ್ಕಾರದ ವಿರುದ್ದ ಗುಡುಗಿದರು.

ಕೊಪ್ಪಳ ತಾಲೂಕಿನ ಹಿಟ್ನಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ ಬೆಲೆ ಸಿಗುತ್ತಿಲ್ಲ. ಈಗಿರುವ ಭತ್ತದ ಬೆಲೆ ಜೊತೆಗೆ ಹೆಚ್ಚುವರಿ 500 ರೂ. ಬೆಲೆ ಹೆಚ್ಚಳ ಮಾಡಬೇಕು. ಪ್ರತ ದಿನವೂ ಬೆಲೆ ಏರಿಕೆ ಆಗುತ್ತಿದೆ. ಈಗ ವಿದ್ಯುತ್ ಸಹ ಹೆಚ್ಚಳ ಮಾಡಲಾಗಿದೆ.

ಸರ್ಕಾರ ಭತ್ತಕ್ಕೆ ಹೆಚ್ಚುವರಿ 500 ರೂ. ಬೆಂಬಲ ಬೆಲೆ ಘೋಷಣೆ ಮಾಡಬೇಕು. 40 ಪೈಸೆ ವಿದ್ಯುತ್ ಶುಲ್ಕ ಹೆಚ್ಚಳ ಮಾಡಿದ್ದು, ಕೋವಿಡ್ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಶುಲ್ಕ ಇಳಿಕೆ ಮಾಡುವ ಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.

Related