ಶಿಕ್ಷಕರ ಸಮಸ್ಯೆ ಬಗೆಹರಿಸಲು ಒತ್ತಾಯ

ಶಿಕ್ಷಕರ ಸಮಸ್ಯೆ ಬಗೆಹರಿಸಲು ಒತ್ತಾಯ

ಸಂಡೂರು : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಂಡೂರು ತಾಲ್ಲೂಕು ಘಟಕವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಮಸ್ಯೆಗಳು, ವೃಂದ ಮತ್ತು ನೇಮಕಾತಿ ತಿದ್ದುಪಡಿ, ಮುಖ್ಯೋಪಾಧ್ಯಾಯರ ವೇತನ ಶ್ರೇಣಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಪ್ಪು ಬಟ್ಟೆ ಧರಿಸಿ ಚಳುವಳಿ ನಡೆಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕರೆಯ ಮೇರೆಗೆ ಈಗಾಗಲೇ ತರಬೇತಿ ಬಹಿಷ್ಕಾರ ಚಲಿವಳಿಯನ್ನು ಮಾಡಲಾಗುತ್ತಿದೆ. ಚಳುವಳಿಯ ಮುಂದುವರಿದ ಭಾಗವಾಗಿ ಮಕ್ಕಳೊಂದಿಗೆ ಶಾಲೆಯಲ್ಲಿದ್ದು ಶೈಕ್ಷಣಿಕ ಕೆಲಸಗಳನ್ನು ನಿರ್ವಹಿಸುತ್ತಾ ಕಪ್ಪು ಬಟ್ಟೆ ಧರಿಸಿ ಅ.21ರಿಂದ ಅ.29ರವರೆಗೆ ಅಸಹಕಾರ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಸಂಘದ ಎಲ್ಲಾ ನಿರ್ದೇಶಕರು ಹಾಗೂ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಮತ್ತು ನಾಮನಿರ್ದೇಶನ ಸದಸ್ಯರುಗಳ ಒಡಗೂಡಿ ಸಾಂಕೇತಿಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಮಾನ್ಯ ಶಿಕ್ಷಣ ಸಚಿವರು, ಪ್ರಧಾನ ಕಾರ್ಯದರ್ಶಿಗಳು, ಶಿಕ್ಷಣ ಇಲಾಖೆ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಇವರಿಗೆ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪರುಶುರಾಮ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳು, ಪ್ರಾಥಮಿಕ ಶಾಲಾ ಶಿಕ್ಷಕರು, ಸುನಿಲ್ ಆರ್ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸರ್ವ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಂಡೂರು ಇವರುಗಳು ಉಪಸ್ಥಿತರಿದ್ದರು.

Related