ಜಿಲ್ಲೆಗೆ ವಿಶೇಷ ಅನುದಾನ ನೀಡಲು ಒತ್ತಾಯ

ಜಿಲ್ಲೆಗೆ ವಿಶೇಷ ಅನುದಾನ ನೀಡಲು ಒತ್ತಾಯ

ಚಾಮರಾಜನಗರ :  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಗಡಿ ಜಿಲ್ಲೆಯ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಬೇಕು ಎಂದು ಕರ್ನಾಟಕ ಸೇನಾಪಡೆ ಒತ್ತಾಯಿಸಿದೆ.

ಸೇನಾ ಪಡೆಯ ಪದಾಧಿಕಾರಿಗಳು ಗುರುವಾರ ಜಿಲ್ಲಾಡಳಿತ  ಭವನದಲ್ಲಿ  ಜಿಲ್ಲಾಧಿಕಾರಿ ಡಾ. ಎಂ.ಆರ್  ರವಿ ಅವರನ್ನು ಭೇಟಿಯಾಗಿ, ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಅವರು ಇದೇ ತಿಂಗಳು 26ರಂದು ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ, ಅಲ್ಲಿ ಅನೇಕ ಅಭಿವೃದ್ದಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡುತ್ತಿರುವುದು ಸಂತಸದ ವಿಷಯ. ಇದೇ ಸಂದರ್ಭದಲ್ಲಿ ಜಿಲ್ಲಾ ಕೇಂದ್ರಕ್ಕೂ ಭೇಟಿ ನೀಡಿ ಇಲ್ಲಿನ ಅನೇಕ ಸಮಸ್ಯೆಗಳನ್ನು ಪರಿಶೀಲಿಸಬೇಕು’ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ.

Related