ಸಿಲಿಕಾನ್ ಸಿಟಿಯಲ್ಲಿ 7 ಸಾವಿರ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ

ಸಿಲಿಕಾನ್ ಸಿಟಿಯಲ್ಲಿ 7 ಸಾವಿರ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ

ಬೆಂಗಳೂರು: ರಾಜ್ಯದಲ್ಲಿ ಹಾಗೂ ಬೆಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿರುವುದರಿಂದ ಬೆಂಗಳೂರು ನಗರದಲ್ಲಿ ಏಳು ಸಾವಿರ ಹೈ ರೆಸಲ್ಯೂಷನ್ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ ಎಂದು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ಹೇಳಿದರು.

ಹೌದು, ನಗರದಲ್ಲಿ ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಜನಸಂದಣಿ, ಇಂಟರ್ ಸೆಕ್ಷನ್, ಮಹಿಳೆಯರು ಓಡಾಡುವ ಸ್ಥಳಗಳು ಸೇರಿದಂತೆ ಹಲವು ಕಡೆ 7 ಸಾವಿರ ಹೈ ರೆಸಲ್ಯೂಷನ್​ ಕ್ಯಾಮರಾ ಅಳವಡಿಸಲಾಗಿದೆ. 80 ಠಾಣೆಗಳಲ್ಲಿ ಕ್ಯಾಮರಾ ದೃಶ್ಯಾವಳಿ ನೋಡುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು. ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನ 30 ಕಡೆ ಸೇಫ್ಟಿ ಐಲ್ಯಾಂಡ್​​ ಓಪನ್​ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್​​​ನಲ್ಲಿ ಬಟನ್​​ ಒತ್ತಿದ್ರೆ ಪೊಲೀಸರಿಗೆ ಮಾಹಿತಿ ಬರುತ್ತೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ ಎಂದು ತಿಳಿಸಿದರು.

Related