ಹಲ್ಮಿಡಿ ಶಾಸನ ಪ್ರತಿಷ್ಟಾಪನೆ

ಹಲ್ಮಿಡಿ ಶಾಸನ ಪ್ರತಿಷ್ಟಾಪನೆ

ದೇವನಹಳ್ಳಿ: ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ ಪೂರ್ಣಗೊಂಡಿದ್ದು, ರಾಜ್ಯದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ.

ಇದನ್ನು ಸ್ಮರಣೀಯ ಕಾರ್ಯಕ್ರಮವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಇದರಂತೆ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದಕ ನ್ನಡದ ಮೊದಲ ಶಿಲಾ ಶಾಸನ ‘ಹಲ್ಮಿಡಿ ಶಾಸನ’ದ ಕಲ್ಲಿನ ಪ್ರತಿಕೃತಿ ರಚಿಸಿ, ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಷ್ಠಾಪಿಸಲು ಸೂಚನೆ ನೀಡಲಾಗಿದ್ದು ಅದರಂತೆ ಇಂದು ಜಿಲ್ಲಾಡಳಿತ ಭವನ ಬೀರಸಂದ್ರದಲ್ಲಿಇಂದು (ಶುಕ್ರವಾರ ನವೆಂಬರ್ 01) ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಪ್ರತಿಷ್ಟಾಪನೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧಾ, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್ .ನಟರಾಜ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related