ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಲು ಸೂಚನೆ

ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಲು ಸೂಚನೆ

ವಿಜಯಪುರ; ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಹಾಸಿಗೆಗಳನ್ನು ಮೀಸಲಿಡಲು ಜಿಲ್ಲಾಡಳಿತ ಅಭಿವೃದ್ದಿಪಡಿಸಲಾದ ಲಭ್ಯವಿರುವ ಹಾಸಿಗೆಗಳ ಮಾಹಿತಿ ಆಪ್‌ಡೆಟ್ ಮಾಡಲು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯವರಿಗೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಸೂಚಿಸಿದರು.

ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು, ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಮುಖ್ಯಸ್ಥರೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಔಷಧಿ ಪೂರೈಕೆ ಮಾಡುವ ಕಂಪನಿಗಳಿಗೆ ಬೇಡಿಕೆ ಸಲ್ಲಿಸಿ, ಅದರ ಪ್ರತಿಯನ್ನು ಸಹಾಯಕ ಔಷಧಿ ನಿಯಂತ್ರಕರಿಗೆ ಸಲ್ಲಿಸಲು ಸದರಿಯವರು ಸರ್ಕಾರದಿಂದ ವಿಭಾಗ ಮಟ್ಟದಲ್ಲಿ ನಿಯೋಜಿಸಲಾದ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಿ, ಜಿಲ್ಲೆಗೆ ಔಷಧಿಯ ಸರಬರಾಜು ನೋಡಿಕೊಳ್ಳುವಂತೆ ಸೂಚಿಸಿದರು.

ಸದ್ಯಕ್ಕೆ ವೈದ್ಯಕೀಯ ಆಕ್ಸಿಜನ್ ತೊಂದರೆ ಇರುವುದಿಲ್ಲ. ಈ ಕುರಿತು ಸಭೆ ಜರುಗಿಸಿ, ತೊಂದರೆಯಾಗದAತೆ ನೋಡಿಕೊಳ್ಳಲಾಗುವುದು ಎಂದರು.
ವಿಡಿಯೋ ಸಂವಾದದಲ್ಲಿ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು, ಸಹಾಯಕ ಔಷಧಿ ನಿಯಂತ್ರಕರವರು ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಮುಖ್ಯಸ್ಥರು ಇದ್ದರು.

Related