ವೈದ್ಯಕೀಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ

ವೈದ್ಯಕೀಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ

ಬೆಂಗಳೂರು : ಕೇಂದ್ರ ಸರ್ಕಾರ ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿದ್ದಂತ ಸರ್ಕಾರಿ ವೈದ್ಯಕೀಯ ಸಿಬ್ಬಂದಿಗಳಿಗೆ ಮಾತ್ರವೇ 50 ಲಕ್ಷ ವಿಮಾ ಪರಿಹಾರ ನಿಧಿ ವ್ಯಾಪ್ತಿಗೆ ಒಳಪಡಿಸುವುದಾಗಿ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಸರ್ಕಾರಿ ವೈದ್ಯಕೀಯ ಸಿಬ್ಬಂದಿಗಳಲ್ಲದೇ ಅರೆವೈದ್ಯಕೀಯ ಸಿಬ್ಬಂದಿಗಳಿಗೂ ವಿಮಾ ಸೌಲಭ್ಯ ವ್ಯಾಪ್ತಿಗೆ ತರಲಾಗುತ್ತಿದೆ ಎಂಬುದಾಗಿ ಘೋಷಣೆ ಮಾಡಿದೆ. ಈ ಮೂಲಕ ಗುತ್ತಿಗೆ ಆಧಾರದ ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗಳಿಗೆ ಸಿಹಿ ಸುದ್ದಿ ನೀಡಿದೆ.

ಈ ಕುರಿತಂತೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಗಾಗಲೇ ಸರ್ಕಾರಿ ವೈದ್ಯಕೀಯ ಸಿಬ್ಬಂದಿಗಳಿಗೆ ಕೋವಿಡ್-19 ವಿಮಾ ಸೌಲಭ್ಯ ವ್ಯಾಪ್ತಿಗೆ ಒಳಪಡಿಸಲಾಗಿತ್ತು. ಈ ಮೂಲಕ ಅವರಿಗೆ ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡಲು ಉತ್ತೇಜಿಸಲಾಗಿತ್ತು. ಇದೀಗ ಗುತ್ತಿಗೆ ಆಧಾರದ ಮೇಲೆ ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವಂತ ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗಳಿಗೂ ವಿಮಾ ಸೌಲಭ್ಯ ವ್ಯಾಪ್ತಿಗೆ ಒಳಪಡಿಸಲಾಗುವಂತ ತೀರ್ಮಾನ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

Related