ಕುತೂಹಲ ಮೂಡಿಸಿದ ಡಿಸಿಎಂ ಜಾರಕಿಹೊಳಿ ಭೇಟಿ

ಕುತೂಹಲ ಮೂಡಿಸಿದ ಡಿಸಿಎಂ ಜಾರಕಿಹೊಳಿ ಭೇಟಿ

ಬೆಂಗಳೂರು: ಕೆಲವು ದಿನಗಳ ಹಿಂದೆ ರಾಜಕೀಯದಲ್ಲಿ ಮುನಿಸಿನ ಬಿರುಗಾಳಿ ಎದ್ದಿದೆ ಎಂದು ಗುಸು-ಗುಸು ಮಾತು ಆಡುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಾರಕಿಹೊಳಿಯವರನ್ನು ಗೌಪ್ಯವಾಗಿ ಭೇಟಿಯಾಗಿದ್ದಾರೆ.

ಹೌದು, ಕೆಲ ಕಾರಣಾಂತರಗಳಿಂದ ಮುನಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ  ಅವರನ್ನು ಖುದ್ದು ಡಿಕೆ ಶಿವಕುಮಾರ್ ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಇಂದು (ನ.07 ಮಂಗಳವಾರ) ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾತಕಿಹೊಳಿಯವರ ಸರ್ಕಾರಿ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದರು. ಬಳಿಕ ಅವರು ನೇರವಾಗಿ ದೆಹಲಿಗೆ ಹೋಗಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಬೆಳಗಾವಿ ರಾಜಕೀಯದಲ್ಲಿ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿರುವ ಮಧ್ಯೆ ಡಿಕೆ ಶಿವಕುಮಾರ್ ಭೇಟಿ ಕುತೂಹಲ ಮೂಡಿಸಿದೆ.

 

Related