ಅಂತರಾಷ್ಟ್ರೀಯ ಮಹಿಳೆಯರ ದಿನ

ಅಂತರಾಷ್ಟ್ರೀಯ ಮಹಿಳೆಯರ ದಿನ

ಬೆಂಗಳೂರು, ಮಾ. 3 : ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ “ಅಂತರಾಷ್ಟ್ರೀಯ ಮಹಿಳೆಯರ ದಿನ” ವನ್ನು ಆಚರಿಸುತ್ತಾರೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ, ಅದು ರಾಷ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವಾ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲೂ ತಮ್ಮದೇ ಆದ ಛಾಪನ್ನ ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನು ಗುರುತಿಸಿ ಈ ದಿನವನ್ನು ಅವರಿಗೆ ಅರ್ಪಿಸಲಾಗಿದೆ. 1975ರ “ಅಂತರಾಷ್ಟ್ರೀಯ ಮಹಿಳೆಯರ ದಿನ”ದ ಸಮಯದಲ್ಲಿ, ಮಾ.8 ರಂದು ಸಂಯುಕ್ತ ರಾಷ್ಟ್ರಗಳು ಮಹಿಳಾ ದಿನ ಆಚರಿಸಲು ಆರಂಭಿಸಿದವು.
ಎರಡು ವರ್ಷದ ನಂತರ, 1977ರಲ್ಲಿ, “ದಿ ಜನರಲ್ ಅಸ್ಸೆಂಬ್ಲಿ” ಮಹಿಳೆರ ಹಕ್ಕು ಮತ್ತು ಶಾಂತಿ ಸ್ಥಾಪನೆಯನ್ನು ಆಯಾ ದೇಶದ ಸದಸ್ಯರು ಗಮನಿಸಿ ತಮ್ಮ ದೇಶದ ಐತಿಹಾಸಿಕ ಮತ್ತು ರಾಷ್ಟ್ರೀಯ ಸಂಪ್ರದಾಯಕ್ಕೆ ತಕ್ಕಂತೆ ಅಳವಡಿಸಿಕೊಳ್ಳುವಂತೆ ಕರೆ ನೀಡಿತು. ಹೀಗೆ ಕರೆನೀಡುವಾಗ ಮಹಿಳೆಯ ಪಾತ್ರ ಹಾಗು ಅವರ ಮೇಲೆ ನಡೆಯುತ್ತಿರುವ ಪಕ್ಷಪಾತವನ್ನ ಗಮನಿಸಿ

Related