ವಿದ್ಯುತ್ ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ

ವಿದ್ಯುತ್ ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ

ಕೊಪ್ಪಳ: ವಿದ್ಯುತ್ ಗುತ್ತಿಗೆದಾರ ವೀರನಗೌಡ ಪಾಟೀಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪದ ಹೊಸಲಿಂಗಪುರ ಗ್ರಾಮದಲ್ಲಿರುವ ಮನೆ ಮತ್ತು ಬೆಂಗಳೂರಿನ 8 ಸ್ಥಳಗಳಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಗೋವಾ ಮತ್ತು ಹುಬ್ಬಳ್ಳಿಯಲ್ಲೂ ದಾಳಿ ನಡೆಸಿ ಇಡೀ ದಿನ ದಾಖಲೆಗಳನ್ನು ಪರಿಶೀಲಿಸಿದರು.

ಇನ್ನು ಬೆಂಗಳೂರು ಮಾತ್ರವಲ್ಲದೆ ಬಳ್ಳಾರಿಯ 2 ಸ್ಥಳಗಳಲ್ಲಿ ಮತ್ತು ಕೊಪ್ಪಳ ಪಟ್ಟಣದ ಸಮೀಪದ ಹೊಸಲಿಂಗಪುರದಲ್ಲಿ ಐಟಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಕಚೇರಿ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದು, ಹಲವು ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಗುರುವಾರವೂ ದಾಳಿ ಮುಂದುವರಿಯುವ ನಿರೀಕ್ಷೆ ಇದೆ. ಐಟಿ ದಾಳಿ ವೇಳೆ ಈವರೆಗೆ ಸುಮಾರು 16 ಐಷಾರಾಮಿ ಕಾರುಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

 

Related