ಯತೀಂದ್ರ ಎದುರಾಳಿಯಾದರೆ ಅದು ಒಳ್ಳೆಯದು: ಪ್ರತಾಪ್ ಸಿಂಹ

ಯತೀಂದ್ರ ಎದುರಾಳಿಯಾದರೆ ಅದು ಒಳ್ಳೆಯದು: ಪ್ರತಾಪ್ ಸಿಂಹ

ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಅವರು ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ ಅವರು, ಎದುರಾಳಿಯ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಒಬ್ಬ ಪತ್ರಕರ್ತ ಮತ್ತು ಸಿಎಂ ಪುತ್ರನ ನಡುವೆ ಪೈಪೋಟಿ ನಡೆಯುವುದೆಂದರೆ ಅದು ಸಾಮಾನ್ಯವಲ್ಲ ಹಾಗಾಗಿ ನನಗೆ ಯಾವುದೇ ಭಯವಿಲ್ಲ. ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ನಾನೇ ಗೆಲ್ಲುವುದೆಂದು ಗೆಲ್ಲುವ ಭರವಸೆಯನ್ನು ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

 

Related