‘ಇದು ಜನ ವಿರೋಧಿ ಯಾತ್ರೆ’

‘ಇದು ಜನ ವಿರೋಧಿ ಯಾತ್ರೆ’

ಬೆಂಗಳೂರು: ‘ನಾಲ್ವರು ನೂತನ ಕೇಂದ್ರ ಸಚಿವರು 700, 800 ಕಿ.ಮೀ ದೂರ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಕೋವಿಡ್ ನಿಯಮ ಉಲ್ಲಂಘಿಸಿರುವ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಇದರ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಎಚ್ಚರಿಸಿದರು. ಸೋಮವಾರ ಇಲ್ಲಿ ಪತ್ರಕರ್ತರೊಡನೆ ಮಾತನಾಡಿದರು. ‘ ಸಚಿವ ಖೂಬಾ ಅವರು ಯಾದಗಿರಿಯಲ್ಲಿ ಜನಾಶೀರ್ವಾದ ಯಾತ್ರೆಗೆ ಆಗಸಮಿಸಿದಾಗ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ ಕೋರಲಾಯಿತು. ಬಿಜೆಪಿ ಕಾರ್ಯಕರ್ತರು ,ನಾಯಕರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ, 300 ಬೆಂಬಲಿಗರ ವಿರುದ್ಧ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರಿಗೆ ಸ್ಪಂದಿಸಬೇಕಾದ ಮೋದಿ ಸರ್ಕಾರ,  ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಜನರ ಆದಾಯ ಕಡಿಮೆ ಮಾಡಿ, ವೆಚ್ಚ ಹೆಚ್ಚಿಸಿದೆ. ಇದರ ಮಧ್ಯೆ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದು, ಜನಾಶೀರ್ವಾದ ಯಾತ್ರೆ ಅಲ್ಲ, ಜನ ವಿರೋಧಿ ಯಾತ್ರೆ ಎಂದರು.

Related