ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ; ಸಿಎಂ ಹೇಳಿದ್ದೇನು?

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ; ಸಿಎಂ ಹೇಳಿದ್ದೇನು?

ಕೊಡಗು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ ಒಂದು ಸೃಷ್ಟಿಯಾಗಿದೆ.

ಹೌದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ ಇದರಿಂದ ರಾಜ್ಯ ರಾಜಕೀಯದಲ್ಲಿ ಗ್ರಾಸವಾಗಿ ಚರ್ಚೆಯಾಗುತ್ತಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದರು. ಆದರೆ ಮತ್ತೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದಾರೆ ಇದರಿಂದ ಕಾಂಗ್ರೆಸ್ ನಾಯಕರು ಇಂದು ಸಂಜೆ ರಾಜ್ಯದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಇನ್ನು ಜಗದೀಶ್ ಶೆಟ್ಟರ ಬಿಜೆಪಿ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ರೀತಿ ಅನ್ಯಾಯವಾಗಿಲ್ಲ ಎಂದು.

ಕೊಡಗಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್​ಸಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ.

Related