ಜಗ್ಗೇಶ್ ಪ್ರಮಾಣ ವಚನ ಸ್ವೀಕಾರ..

ಜಗ್ಗೇಶ್ ಪ್ರಮಾಣ ವಚನ ಸ್ವೀಕಾರ..

ನವದೆಹಲಿ, ಜು 08 : ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸ್ಯಾಂಡಲ್‌ವುಡ್ ನಟ ಜಗ್ಗೇಶ್ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಚ್ಚ ಕನ್ನಡದಲ್ಲೇ ಜಗ್ಗೇಶ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ. ಉಪರಾಷ್ಟçಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಕನ್ನಡದಲ್ಲಿ ರಾಯರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್‌ಗುರು ರಾಘವೇಂದ್ರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಅವರು, ಅದರ ವಿಡಿಯೋ ತುಣಕವೊಂದನ್ನ ತಮ್ಮ ಟ್ವೀಟರ್ ಅಕೌಂಟ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವೇಳೆ, ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸ್ವೀಕಾರ ಮಾಡಿದ್ದೇನೆ. ಸಿರಿಗನ್ನಡದಲ್ಲಿ ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠ ಕ್ಷಣ. ಹೃದಯಪೂರ್ವಕ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಕುಮಾರ್ ಅವರಿಗೆ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಮಾಡುವುದಕ್ಕೂ ಮುಂಚಿತವಾಗಿ ದೆಹಲಿಯ ಬೃಂದಾವನದಲ್ಲಿ ರಾಯರ ದರ್ಶನ ಪಡೆದುಕೊಂಡಿದ್ದಾರೆ. ಜಗ್ಗೇಶ್ ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಲೆಹರ್ ಸಿಂಗ್ ಕೂಡ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

 

Related