ಕಾವಿ ತೊಟ್ಟು ಕಾಮದಾಟವಾಡಿದ ಶ್ರೀಗಳಿಗೆ ಜೈಲೇ ಗತಿ

ಕಾವಿ ತೊಟ್ಟು ಕಾಮದಾಟವಾಡಿದ ಶ್ರೀಗಳಿಗೆ ಜೈಲೇ ಗತಿ

ನವದೆಹಲಿ: ಕಾವಿ ತೊಟ್ಟುಕೊಂಡು ಅಪ್ರಾಪ್ತ ಬಾಲೆಯರ ಜೊತೆ ಕಾಮದಾಟವಾಡಿದ ಮುರುಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು, ಅಪ್ರಾಪ್ತ ಇಬ್ಬರ ಹೆಣ್ಣು ಮಕ್ಕಳ ಜೊತೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಗಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ಮಂಗಳವಾರ ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸಿದೆ ಆದ್ದರಿಂದ ಶಿವಮೂರ್ತಿ ಶರಣರಿಗೆ ಮತ್ತೆ ಜೈಲೇ ಗತಿಯಾಗಿದೆ.

ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್‌, ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀಜು ನೀಡಿತ್ತು. ಆದರೆ ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಶ್ರೀಗಳ ಜಾಮೀನು ರದ್ದು ಕೋರಿ ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಿ, 4 ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿ ಮುರುಘಾ ಶ್ರೀಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.

ಸುಪ್ರೀಂ ಕೋರ್ಟ್‌ ಆದೇಶದಂತೆ, ಮುರುಘಾ ಶ್ರೀಗಳು ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯರು ಹಾಗೂ ಪೋಷಕರ ವಿಚಾರಣೆಗೆ ಮುಗಿಸುವವರೆಗೂ ಶ್ರೀಗಳು ಬಂಧನದಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Related