ಡಿಸಿಎಂ ನೇತೃತ್ವದಲ್ಲಿ ಇಂದಿನಿಂದ ಜನಸ್ಪಂದನ ಕಾರ್ಯಕ್ರಮ

ಡಿಸಿಎಂ ನೇತೃತ್ವದಲ್ಲಿ ಇಂದಿನಿಂದ ಜನಸ್ಪಂದನ ಕಾರ್ಯಕ್ರಮ

ಬೆಂಗಳೂರು: ರಾಜ ಕಾಂಗ್ರೆಸ್ ಸರ್ಕಾರ ಇಂದಿನಿಂದ ಜನ ಸ್ಪಂದನ ಕಾರ್ಯಕ್ರಮವನ್ನು ಕೈಗೊಂಡಿದ್ದು ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಅವರ ಸಮಸ್ಯೆಗೆ ಪರಿಹಾರ ನೀಡುವುದಾಗಿ ಈ ಕಾರ್ಯಕ್ರಮದ ಉದ್ದೇಶವಾಗಿರುವುದರಿಂದ ಎಲ್ಲ ಜನಸಾಮಾನ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಮ್ಮ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳು ಭಾಗಿಯಾಗಲಿದ್ದು ಎಲ್ಲಾ ರೀತಿಯ ಸಮಸ್ಯೆಗಳನ್ನು ಇಲ್ಲಿ ಬಗೆಹರಿಸಿಕೊಳ್ಳಬಹುದು ಎಂದು ತಿಳಿದು ಬಂದಿದೆ.

ಹೌದು ಜನಸಾಮಾನ್ಯರು ರಾಜಕೀಯ ವ್ಯಕ್ತಿ ಅಥವಾ ಇನ್ನಿತರ ವ್ಯಕ್ತಿಗಳನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗು ತ್ತಿಲ್ಲ ಆದ್ದರಿಂದ ಕಾಂಗ್ರೆಸ್ ಸರ್ಕಾರ ಈಗ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಲೆಂದು ಜನಸ್ಪಂದನ ಕಾರ್ಯಕ್ರಮವನ್ನು ಕೈಗೊಳ್ಳುತ್ತಿದೆ. ಬಿಬಿಎಂಪಿ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು, ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಂಆರ್‌ಸಿಎಲ್, ಬಿಎಂಆರ್​ಡಿಎ, ಸಾರಿಗೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖಾ ಅಧಿಕಾರಿಗಳು ಭಾಗಿ ಆಗಲಿದ್ದಾರೆ.

ಇಂದು ಬೆಳಿಗ್ಗೆ (ಜನವರಿ 3) ರಂದು ಕೆಆರ್ ಪುರಂ ನ ಐಟಿಐ ಕ್ರೀಡಾಂಗಣದಲ್ಲಿ ಕೆಆರ್ ಪುರ ಮತ್ತು ಮಹದೇವಪುರ ಕ್ಷೇತ್ರದ ಜನತೆ ತಮ್ಮ ಸಮಸ್ಯೆಗಳನ್ನು ಇಲ್ಲಿ ಬಗೆಹರಿಸಿಕೊಳ್ಳಬಹುದು. ಇನ್ನು ಅಧಿಕಾರಿಗಳು ಸ್ಥಳದಲ್ಲೇ ಜನರ ಅಹವಾಲುಗಳ ಸ್ವೀಕಾರ ಮಾಡಲಿದ್ದಾರೆ. ಜನರ ದೂರುಗಳನ್ನು ಸ್ವೀಕರಿಸಲು 10 ಕೌಂಟರ್ ಓಪನ್ ಮಾಡಲಾಗಿದ್ದು ಅಂಗವಿಕಲರು, ಹಿರಿಯರಿಗೆ ವಿಶೇಷ ಕೌಂಟರ್ ತೆರೆಯಲಾಗಿದೆ. ಆಯಾ ಇಲಾಖೆಗೆ ಸಂಬಂಧಿಸಿದಂತೆ ಕಂಪ್ಯೂಟರ್ ‌ನಲ್ಲಿ ದೂರುಗಳ ದಾಖಲು ಮಾಡಿಕೊಂಡು ಖುದ್ದು ಸ್ಥಳದಲ್ಲೇ ಜನರ ಸಮಸ್ಯೆಯನ್ನ ಡಿಸಿಎಂ ಡಿಕೆ ಶಿವಕುಮಾರ್ ಆಲಿಸಲಿದ್ದಾರೆ. ಅಲ್ಲದೆ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡಲು ಕಾರ್ಯಕ್ರಮ ಕೈಗೊಳ್ಳಲಾಗುತ್ತೆ.

 

Related