ಜನೌಷಧಿ ದಿವಸ್ ಆಚರಣೆ

ಜನೌಷಧಿ ದಿವಸ್ ಆಚರಣೆ

ಬೆಂಗಳೂರು: ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ  ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ  ಜನೌಷಧಿ ದಿವಸ್ ಆಚರಣೆ-2023 ಮತ್ತು 100 ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್  ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡುಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂಚಾರಿ ಆರೋಗ್ಯ ಕ್ಲಿನಿಕ್ ಗೆ  ಕೇಂದ್ರ  ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ  ನೀಡಿದರು.  ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ,  ಮತ್ತಿತತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

 

Related