ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ

ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರಿದರು. ಮಂಗಳವಾರ ಸಂಜೆ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಸಮ್ಮುಖದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಿಜೆಪಿ ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಜಯಪ್ರಕಾಶ್ ಹೆಗ್ಡೆ, ಸುಕುಮಾರ ಶೆಟ್ಟಿ, ಎಂ.ಪಿ ಕುಮಾರಸ್ವಾಮಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಜಿ ಪರಮೇಶ್ವರ, ಕೆ ಜೆ ಜಾರ್ಜ್, ಮಧು ಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಚಂದ್ರಪ್ಪ, ಶಾಸಕರಾದ ತಮ್ಮಯ್ಯ, ರಾಜೇಗೌಡ, ಮುಖಂಡರಾದ ಬಿ | ಎಲ್ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Related