ಲೋಕಸಮರಕ್ಕೆ 3 ಕ್ಷೇತ್ರದಲ್ಲಿ ಸಜ್ಜಾದ ಜೆಡಿಎಸ್ ಅಭ್ಯರ್ಥಿಗಳು..!

ಲೋಕಸಮರಕ್ಕೆ 3 ಕ್ಷೇತ್ರದಲ್ಲಿ ಸಜ್ಜಾದ ಜೆಡಿಎಸ್ ಅಭ್ಯರ್ಥಿಗಳು..!

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಮೈತ್ರಿಯನ್ನು ಮಾಡಿಕೊಂಡಿದೆ.

ಇನ್ನು ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಮೂರು ಕ್ಷೇತ್ರವನ್ನು ಬಿಜೆಪಿ ಬಿಟ್ಟುಕೊಟ್ಟಿದೆ. ಕೋಲಾರ ಸೇರಿದಂತೆ ಮಂಡ್ಯ, ಹಾಸನ ಈ ಮೂರು ಕ್ಷೇತ್ರಗಳನ್ನು ಜೆಡಿಎಸ್ ಅಭ್ಯರ್ಥಿಗಳು ಪಾಲಾಗಿದ್ದು ಎಲ್ಲಾ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಂ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಇಂದು ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್  ಘೋಷಣೆ ಮಾಡಿದ್ದಾರೆ. ಕೋಲಾರ ಸೀಟು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈ ಮೂಲಕ ಜೆಡಿಎಸ್‍ಗೆ ಮೂರು ಸೀಟು ಬಿಟ್ಟು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಿ. ಕೋಲಾರ, ಹಾಸನ, ಮಂಡ್ಯ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ. ನಿಮಗೆ ಕೈ ಮುಗಿದು ಕೇಳಿಕೊಳ್ತೀನಿ. ಪ್ರಧಾನಿ ಮೋದಿಗಾಗಿ ಕೆಲಸ ಮಾಡಿ. ಮೂರು ಕ್ಷೇತ್ರದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ರೂ ಬಿಟ್ಟುಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ 25 ಅಭ್ಯರ್ಥಿಗಳ ಆಯ್ಕೆ ಮಾಡಿದೆ. ಜೆಡಿಎಸ್‍ಗೆ ಮೂರು ಕ್ಷೇತ್ರ ಬಿಟ್ಟು ಕೊಟ್ಟಿದ್ದೇವೆ. ಅಭ್ಯರ್ಥಿ ಯಾರಾಗಾಬೇಕು ಅಂತ ನಾವು ಹಸ್ತಕ್ಷೇಪ ಮಾಡಿಲ್ಲ. ಆದರೆ ಒಟ್ಟಾಗಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ.

 

Related